ಬೆಂಗಳೂರು: ಇಂದು ಇಡೀ ದೇಶದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ, ಆಯುಷ್ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ತಮ್ಮ ನಿವಾಸದಲ್ಲೇ ಯೋಗ ಮಾಡಿದ ಸಿಎಂ ಬಿಎಸ್ವೈ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಮನೆಯಲ್ಲೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಿ ಎನ್ನುವ ಸಂದೇಶ ನೀಡಿದರು.