Breaking News

ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ವಿಚಾರ ನನಗೆ ಗೊತ್ತಿಲ್ಲ: ಸತೀಶ್

Spread the love

ಚಿಕ್ಕೋಡಿ: ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ರಾಜೀನಾಮೆ ಕೊಡುವ ಈ ಬಗ್ಗೆ ಅವರನ್ನೇ ಕೇಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದ ಅವರು, ಅವರ ರಾಜೀನಾಮೆ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.

ಲಾಕ್‍ಡೌನ್ ಓಪನ್ ವಿಚಾರವಾಗಿ ಮಾತನಾಡಿದ ಅವರು, ಲಾಕ್ ಡೌನ್ ತಕ್ಷಣವೇ ಓಪನ್ ಮಾಡುವುದಕ್ಕೆ ಆಗುವುದಿಲ್ಲ. ಸರ್ಕಾರ ಹಂತ ಹಂತವಾಗಿ ಓಪನ್ ಮಾಡಲಿ, ಸರಕಾರ ಹೇಗೆ ಲಾಕ್‍ಡೌನ್ ಓಪನ್ ಮಾಡುತ್ತದೆ ಎಂಬುವುದನ್ನು ಕಾದು ನೋಡೋಣ. ಹಂತ ಹಂತವಾಗಿ ಲಾಕ್ ಡೌನ್ ಓಪನ್ ಮಾಡುವಂತೆ ನಾವು ಕೂಡ ಸಲಹೆ ನೀಡಿದ್ದೇವೆ ಎಂದರು.

ಇದಕ್ಕೂ ಮೊದಲು ಶಾಸಕ ಸತೀಶ್ ಜಾರಕಿಹೊಳಿ ಹುಕ್ಕೇರಿ ತಾಲೂಕು ಪಂಚಾಯತಿ ಸಭಾ ಭವನದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಉಮೇಶ್ ಸಿದ್ನಾಳ್, ಜಿಲ್ಲಾ ಪಂಚಾಯತಿ ಸಹಾಯಕ ಎಂಜಿನಿಯರ್ ಪಟ್ಟಣಶೆಟ್ಟಿ, ತಹಶೀಲ್ದಾರ್ ಡಿ.ಎಚ್.ಹೂಗಾರ, ಲೋಕೋಪಯೋಗಿ ಇಲಾಖೆ ಅಧಿಕಾರಿ ಎಸ್.ಕೆ.ಹುಕ್ಕೇರಿ, ಕಾಂಗ್ರೆಸ್ ಮುಖಂಡ ಕಿರಣ ರಜಪೂತ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ತಾಯಿಯೊಂದಿಗೆ ಚಿನ್ನದ ಹುಡುಗ ಕಾರ್ತಿಕ್

Spread the loveಬೆಳಗಾವಿ: ತಾಯಿ ಟೈಲರಿಂಗ್ ಕೆಲಸ ಮಾಡುತ್ತಾರೆ. ತಂದೆ ಇಲ್ಲ. ತಾಯಿಗೆ-ಮಗ, ಮಗನಿಗೆ-ತಾಯಿನೇ ಎಲ್ಲಾ. ಮನೆಯಲ್ಲಿ ಬಡತನ ಹಾಸು ಹೊಕ್ಕಾಗಿತ್ತು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ