Breaking News

ಇಬ್ಬರೂ ಬೇರೆ ಮದುವೆಯಾಗಿದ್ರೂ ಬೆಳೆದ ಅಕ್ರಮ ಸಂಬಂಧ, ನಂತರ ದುಡುಕಿನ ನಿರ್ಧಾರ

Spread the love

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ಬಳಿ ಮಹಿಳೆಯೊಬ್ಬರು ಪ್ರಿಯಕರನ ತೊಡೆಯ ಮೇಲೆಯೇ ಪ್ರಾಣ ಬಿಟ್ಟಿದ್ದಾರೆ.

ರೇಣುಕಾ(36) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಗಂಗೂರು ಗ್ರಾಮದ ಅಶೋಕ, ರೇಣುಕಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಅಶೋಕ ಕೇರಳಕ್ಕೆ ಕೆಲಸಕ್ಕಾಗಿ ತೆರಳಿದ್ದ. ಈ ವೇಳೆ ಆತನ ಸ್ನೇಹಿತ ಹಡಲಗೇರಿ ಗ್ರಾಮದ ಬಸವರಾಜ ರೇಣುಕ ಜೊತೆಗೆ ಸಂಬಂಧ ಬೆಳೆಸಿದ್ದಾನೆ.

ಬಸವರಾಜನಿಗೂ ಮದುವೆಯಾಗಿ ಮಕ್ಕಳಿದ್ದಾರೆ. ಅದೇನಾಯ್ತೋ ರೇಣುಕಾ ಮತ್ತು ಬಸವರಾಜ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದು, ಬಿದರಕುಂದಿ ಗ್ರಾಮದ ಹೊರವಲಯಕ್ಕೆ ಹೋಗಿ ವಿಷ ಸೇವಿಸಿದ್ದಾರೆ.

ಜಾಸ್ತಿ ವಿಷ ಕುಡಿದ ರೇಣುಕಾ ರಕ್ತಕಾರಿ ಒದ್ದಾಡುತ್ತಾ ಪ್ರಿಯಕರನ ತೊಡೆಯ ಮೇಲೆ ಪ್ರಾಣ ಬಿಟ್ಟಿದ್ದಾಳೆ. ಇವರ ಕೂಗಾಟ ಕೇಳಿಬಂದ ಕುರಿಗಾಹಿಗಳು ಮೊಬೈಲ್ನಲ್ಲಿ ದೃಶ್ಯ ಸೆರೆ ಹಿಡಿದಿದ್ದಾರೆ. ಬಸವರಾಜನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ