Breaking News

ಕೊರೊನಾ ಎರಡನೆ ಅಲೆಗೆ ಕಾರಣವಾಗಿದ್ದ ಡೆಲ್ಟಾ ಮಾದರಿಯ ರೂಪಾಂತರ ವೈರಸ್ ಇದೀಗ ಇನ್ನಷ್ಟು ರೂಪಾಂತರ

Spread the love

ನವದೆಹಲಿ: ಕೊರೊನಾ ಎರಡನೆ ಅಲೆಗೆ ಕಾರಣವಾಗಿದ್ದ ಡೆಲ್ಟಾ ಮಾದರಿಯ ರೂಪಾಂತರ ವೈರಸ್ ಇದೀಗ ಇನ್ನಷ್ಟು ರೂಪಾಂತರಗೊಂಡಿದ್ದು, ಡೆಲ್ಟಾ ಪ್ಲಸ್ ಮಾದರಿಯಾಗಿ ಬದಲಾವಣೆಗೊಂಡಿದೆ. ಹೊಸ ಹೆಮ್ಮಾರಿ ಯುವಕರನ್ನೇ ಹೆಚ್ಚು ಟಾರ್ಗೆಟ್ ಮಾಡುತ್ತಿದೆ ಎಂಬ ಆತಂಕಕಾರಿ ವಿಷಯ ಹೊರಬಿದ್ದಿದೆ.

ಕರ್ನಾಟಕ ಸೇರಿದಂತೆ ದೇಶದ ನಾಲ್ಕುರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ಮಾದರಿಯ ವೈರಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ ಇಬ್ಬರು ಇಂತಹ ಸೋಂಕಿನಿಂದ ಬಳಲುತ್ತಿದ್ದಾರೆ. ಈ ನಡುವೆ ಕೊರೊನಾ ಎರಡನೇ ಅಲೆಯಲ್ಲಿ ಸಾವನ್ನಪ್ಪಿದ ಸುಮಾರು 11,000 ಜನರ ಪೈಕಿ ಬಹುತೇಕ ಯುವಕರು ಡೆಲ್ಟಾದಿಂದ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.

ಯುವಕರನ್ನೇ ಟಾರ್ಗೆಟ್ ಮಾಡಿರುವ ಡೆಲ್ಟಾ ವೈರಸ್ ಗೆ 40 ವರ್ಷದೊಳಗಿನ ಜನರೇ ಹೆಚ್ಚು ಬಲಿಯಾಗಿದ್ದಾರೆ. ತಜ್ನರ ಪ್ರಕಾರ ಡೆಲ್ಟಾದಿಂದ ರೂಪಾಂತರಗೊಂಡಿರುವ ಡೆಲ್ಟಾ ಪ್ಲಸ್ ರೂಪಾಂತಿರಿ ವೈರಸ್ ಮೂರನೇ ಅಲೆಗೂ ಕಾರಣವಾಗಬಹುದು. ಒಟ್ಟಾರೆ ಒಂದೆಡೆ ದೇಶದಲ್ಲಿ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇನ್ನೊಂದೆಡೆ ಡೆಲ್ಟಾ ತೂಪಾಂತರಿ ಡೆಲ್ಟಾ ಪ್ಲಸ್ ಅಟ್ಟಹಾಸ ಆರಂಭವಾಗಿದ್ದು, ಮೂರನೇ ಅಲೆ ದೇಶದಲ್ಲಿ ಸದ್ದಿಲ್ಲದೇ ಆರಂಭವಾಗಿದೆಯೇ ಎಂಬ ಆತಂಕ ಎದುರಾಗಿದೆ.


Spread the love

About Laxminews 24x7

Check Also

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಮುನಿಯಪ್ಪ

Spread the loveಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ