ಚಿತ್ರದುರ್ಗ: ನರೇಂದ್ರ ಮೋದಿ ಅವರು ಪ್ರಧಾನಿ ಆಗಿರುವವರೆಗೆ ದೇಶದಲ್ಲಿ ಕಾಂಗ್ರೆಸ್ ಧೂಳಿಪಟ ಆಗಲಿದೆ ಎಂದು ಸಮಾಜಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.
ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದೆ. ಸಿದ್ದರಾಮಯ್ಯ ಅವರು ಪ್ರಧಾನಿ ಮತ್ತು ಮುಖ್ಯಮಂತ್ರಿ ಅವರನ್ನು ಟೀಕೆ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಕಳೆದುಕೊಂಡು ಬುದ್ದಿ ಭ್ರಮಣೆ ಆಗಿದೆ. ಕಾಂಗ್ರೆಸ್ ಯಾವತ್ತೂ ಅಧಿಕಾರಕ್ಕೆ ಬರುವುದಿಲ್ಲ’ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲೇ ನಾಯಕತ್ವಕ್ಕೆ ಕಿತ್ತಾಟ ನಡೆಯುತ್ತಿದೆ. ಮುಂದೆ ಅಧಿಕಾರಕ್ಕೆ ಬಂದರೆ ಯಾರು ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಜಗಳ ಬಹಿರಂಗವಾಗಿದೆ. ಯಾರು ಕಾಂಗ್ರೆಸ್ ನಾಯಕರು ಎಂಬುದನ್ನು ಮೊದಲು ಹೇಳಿ ಎಂದು ಸವಾಲು ಹಾಕಿದರು.
Laxmi News 24×7