Breaking News

ರಮೇಶ್ ಜಾರಕಿಹೊಳಿ ಹಾಗೂ ಫ್ರೆಂಡ್ಸ್ ಕಾಂಗ್ರೆಸ್ ಗೆ ಮರು ಸೇರ್ಪಡೆ ವಿಚಾರ ಹೈಕಮಾಂಡ್ ನಿರ್ಧರಿಸುತ್ತೆ: ಸತೀಶ್ ಜಾರಕಿಹೊಳಿ

Spread the love

ಬಾಗಲಕೋಟೆ: ರಮೇಶ್ ಜಾರಕಿಹೊಳಿ ರಾಜೀನಾಮೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರ ರಾಜೀನಾಮೆ ಬಗ್ಗೆ ಬಿಜೆಪಿ ಉತ್ತರಿಸಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬಾಗಲಕೋಟೆಯಲ್ಲಿ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಸಹೋದರ ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಬಿಜೆಪಿ ನಾಯಕರು ಸ್ಪಷ್ಟಪಡಿಸಬೇಕು. ಇಷ್ಟಕ್ಕೂ ಶಾಸಕ ಸ್ಥಾನಕ್ಕೆ ಯಾಕೆ ರಾಜಿನಾಮೆ ನೀಡುತ್ತಿದ್ದಾರೆ ಎಂಬುದನ್ನು ರಮೇಶ್ ಅವರೇ ಹೇಳಬೇಕು. ಈಗಾಗಲೇ ಹೆಚ್.ವಿಶ್ವನಾಥ್ ಮಾತನಾಡಲು ಶುರು ಮಾಡಿದ್ದಾರೆ. ಬಿಜೆಪಿಯವರು ಮೊದಲು ಸ್ಪಷ್ಟಪಡಿಸಲಿ ಎಂದರು.

ರಮೇಶ್ ಜಾರಕಿಹೊಳಿ ಹಾಗೂ ಫ್ರೆಂಡ್ಸ್ ಕಾಂಗ್ರೆಸ್ ಗೆ ಮರು ಸೇರ್ಪಡೆ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತೆ. ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ