Breaking News

ಮೈಸೂರಲ್ಲೂ ಪತ್ತೆಯಾದ ಡೆಲ್ಟ ವೈರಸ್‌ ಪ್ರಕರಣ

Spread the love

ಮೈಸೂರು: ಕೊರೊನಾ ಎರಡನೇ ಅಲೆಯ ಸುಳಿಯಿಂದ ಹೊರಬರಲಾಗದ ಕಂಗೆಟ್ಟಿರುವ ಮೈಸೂರಿನ ಜನತೆ ಇದೀಗ ಮತ್ತೊಂದು ಮಾರಣಾಂತಿಕ ವೈರಾಣುವಿನ ಸುಳಿಗೆ ಸಿಲುಕಿದ್ದಾರೆ.

ಕರೋನಾದ ರೂಪಾಂತರ ಡೆಲ್ಟಾ ಪ್ಲಸ್ ನ ಒಂದು ಪ್ರಕರಣ ಮೈಸೂರಿನಲ್ಲಿ ಇರುವುದು ಖಾತ್ರಿಯಾಗಿದೆ.‌ ಈ ಕುರಿತು ಖಾತ್ರಿಪಡಿಸಿರುವ ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು, ಮೈಸೂರು ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. ಸದ್ಯ ಅವರು ಗುಣಮುಖರಾಗಿದ್ದಾರೆ. ಸೋಂಕಿತರ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಅವರ ಬಗ್ಗೆ ಹೆಚ್ಚಿನ ಮಾಹಿತಿ‌ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಕಳೆದ ಏಳು ದಿನಗಳಲ್ಲಿ ಜಿಲ್ಲೆಯಿಂದ 40 ಸ್ಯಾಂಪಲ್ಸ್ ಕಳುಹಿಸಲಾಗಿದೆ. ಮೈಸೂರಿನ ಮೆಡಿಕಲ್ ಕಾಲೇಜಿನಿಂದ ಬೆಂಗಳೂರಿನ ನಿಮಾನ್ಸಿಗೆ ಸ್ಯಾಂಪಲ್ ಕಳುಹಿಸಲಾಗಿದೆ. ಇನ್ನಷ್ಟೇ ಫಲಿತಾಂಶ ಬರಬೇಕಿದೆ ಎಂದರು.

ಶೇ.3 ಮಕ್ಕಳಲ್ಲಿ ಕೊರೊನಾ: ಜಿಲ್ಲೆಯಲ್ಲಿ ಮಕ್ಕಳಲ್ಲಿ ಕೊರೊನಾ ಹೆಚ್ಚಿದೆ ಎಂಬ ವದಂತಿ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾ ಆರೋಗ್ಯಾಧಿಕಾರಿ ಕೆ ಎಚ್ ಪ್ರಸಾದ್, ಶೇಕಡ ಮೂರರಷ್ಟು ಮಕ್ಕಳಿಗೆ ಮಾತ್ರ ಸೋಂಕು ಇದೆ. ಮಾರ್ಚ್ 2020ರಿಂದ ಜೂನ್ 2021ರವರೆಗೆ 1 ಲಕ್ಷದ 63 ಸಾವಿರ ಕೊರೊನಾ ಪ್ರಕರಣಗಳು ದಾಖಲಾಗಿದೆ. ಇದರಲ್ಲಿ 0 – 10 ವರ್ಷದ ಮಕ್ಕಳಲ್ಲಿ ಶೇಕಡಾ 2ರಿಂದ 3ರಷ್ಟು ಪ್ರಮಾಣದಲ್ಲಿ ಪಾಸಿಟಿವ್ ಇದೆ. ಜೂನ್ 2021 ರಲ್ಲಿ 19 ಸಾವಿರ ಪಾಸಿಟಿವ್ ಇದ್ದು, ಇದರಲ್ಲಿ 700 ಮಕ್ಕಳಲ್ಲಿ ಸೋಂಕಿಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ.

Spread the love ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ