Breaking News

ವಿಧಾನಸೌಧದ ಆವರಣದಲ್ಲಿ ಬಸವಣ್ಣನ ಪ್ರತಿಮೆ ನಿರ್ಮಾಣ

Spread the love

ಬೆಂಗಳೂರು, ಜೂನ್ 25; ಕರ್ನಾಟಕದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಬಸವಣ್ಣನ ಪ್ರತಿಮೆ ನಿರ್ಮಾಣವಾಗಲಿದೆ. ಪುತ್ಥಳಿ ನಿರ್ಮಾಣ ಮಾಡಲು ಕಡತವನ್ನು ಮಂಡನೆ ಮಾಡಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ.

9/6/2021ರಂದು ಮುಖ್ಯಮಂತ್ರಿಗಳು ಈ ಕುರಿತ ಟಿಪ್ಪಣಿಗೆ ಸಹಿ ಹಾಕಿದ್ದಾರೆ. ವಿಧಾನಸೌಧದ ಆವರಣದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ಸ್ಥಾಪಿಸಲು ಸೂಕ್ತ ಪ್ರಸ್ತಾವನೆಯೊಂದಿಗೆ ಕಡತವನ್ನು ಮಂಡಿಸಲು ಸೂಚನೆ ನೀಡಿದ್ದಾರೆ.

12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಮಾನತೆಯ ಹರಿಕಾರ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದ ಆವರಣದಲ್ಲಿ ನಿರ್ಮಿಸುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುಖುಟಪ್ರಾಯವಾಗುತ್ತದೆ ಎಂದು ಟಿಪ್ಪಣಿಯಲ್ಲಿ ಹೇಳಿದ್ದಾರೆ.

ತುಮಕೂರಿನ ಸಿದ್ಧಗಂಗಾ ಮಠ ಮುಖ್ಯಮಂತ್ರಿಗಳ ಪ್ರಸ್ತಾವನೆ ಬಗ್ಗೆ ಸಂತಸ ವ್ಯಕ್ತಪಡಿಸಿದೆ. ವಿಧಾನಸೌಧ ಆವರಣದಲ್ಲಿ ವಿಶ್ವಗುರು ಬಸವಣ್ಣನವರ ಪುತ್ಥಳಿಯನ್ನು ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲು ಆದೇಶ ಹೊರಡಿಸಿರುವುದು ಎಲ್ಲಾ ಬಸವ ಅಭಿಮಾನಿಗಳಿಗೆ ಹರ್ಷ ತಂದಿದೆ ಎಂದು ಹೇಳಿದೆ.

2020ರಲ್ಲಿ ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿಯಾಗಿ ವಿಧಾನಸೌಧ ಅಥವ ವಿಕಾಸಸೌಧದ ಆವರಣದಲ್ಲಿ ಬಸವಣ್ಣನ ಪುತ್ಥಳಿ ನಿರ್ಮಿಸುವಂತೆ ಮನವಿ ಮಾಡಿದ್ದರು.

“ಬಸವಣ್ಣ ಬಸವನಬಾಗೇವಾಡಿ ಇಂಗಳೇಶ್ವರದಲ್ಲಿ ಜನಿಸಿ, ಬಿಜ್ಜಳ ರಾಜನ ಆಸ್ಥಾನದಲ್ಲಿ ಮಂತ್ರಿಯಾಗಿ ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದರು. ಕಲ್ಯಾಣ ಕ್ರಾಂತಿಗೆ ಕಾರಣರಾಗಿ, ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರು” ಎಂದು ಬೆಳ್ಳುಬ್ಬಿ ಹೇಳಿದ್ದರು.

 

 

“ಈಗಾಗಲೇ ಮುರುಘಾ ಶರಣರು ತಮಗೆ ಮನವಿ ಮಾಡಿಕೊಂಡಿದ್ದರು. ಈ ಬೇಡಿಕೆಯನ್ನು ಮಾಜಿ ಸಚಿವನಾಗಿ ಸರ್ಕಾರಕ್ಕೆ ತಲುಪಿಸಿದ್ದೇನೆ. ಪುತ್ಥಳಿ ನಿರ್ಮಿಸುವ ಭರವಸೆ ನೀಡಬೇಕು” ಎಂದು ಮನವಿ ಮಾಡಿದ್ದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ