Breaking News

ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಇಂದು ಭೇಟಿ ನೀಡಿದ, ಎಸ್.ಆರ್. ಪಾಟೀಲ

Spread the love

ಬೆಳಗಾವಿ: ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಇಲ್ಲಿನ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಇಂದು ಭೇಟಿ ನೀಡಿ, ಸದ್ಯದ ಕೋವಿಡ್ ಸ್ಥಿತಿಗತಿ ಹಾಗೂ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದರು.

ಎಸ್.ಆರ್. ಪಾಟೀಲ ಅವರು ಜಿಲ್ಲಾಧಿಕಾರಿ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು. ಅಧಿಕಾರಿಗಳು ಅನೇಕ ಮಾಹಿತಿ ನೀಡಿದರು.

ಮೂರನೇ ಅಲೆಗೆ ತಯಾರಿ ಬಗ್ಗೆ ಮಾಹಿತಿ:

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ, ಜಿಲ್ಲೆಯಲ್ಲಿ ಕೋವಿಡ್ ಸಂದರ್ಭದ ಪರಿಸ್ಥಿತಿ ಬಗ್ಗೆ ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ. ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಕೋವಿಡ್ ಈಗ ನಿಯಂತ್ರಣಕ್ಕೆ ಬಂದಿದೆ. ಪಾಸಿಟಿವಿಟಿ ರೇಟ್ ಕೂಡ ಶೇ.5ಕ್ಕಿಂತ ಕಡಿಮೆ ಇದೆ. ಮೂರನೇ ಅಲೆಗೆ ಏನು ತಯಾರಿ ಮಾಡಿಕೊಳ್ಳಲಾಗಿದೆ ಎಂಬ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ” ಎಂದು ತಿಳಿಸಿದರು.


Spread the love

About Laxminews 24x7

Check Also

ಕನಿಷ್ಠ ವೇತನಕ್ಕೆ ಒತ್ತಾಯಿಸಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮನವಿ

Spread the loveಬೆಳಗಾವಿ: ರಾಜ್ಯದ ಅನುಸೂಚಿತ ಉದ್ದಿಮೆಗಳಿಗೆ ಕನಿಷ್ಠ ವೇತನ ಪ್ರಕಟಿಸಬೇಕಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ