Breaking News

ಜುಲೈ 31ರೊಳಗೆ ದ್ವಿತೀಯ ಪಿಯು ಫಲಿತಾಂಶ: ಸುರೇಶ್‌ ಕುಮಾರ್

Spread the love

ಬೆಂಗಳೂರು: ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಜುಲೈ 31ರೊಳಗೆ ಫಲಿತಾಂಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಬಿಎಸ್‌ಇ ಪಠ್ಯಕ್ರಮದ ಶಾಲೆಗಳ 12ನೇ ತರಗತಿ ಮಕ್ಕಳಿಗೆ ಜು.31ರೊಳಗೆ ಫಲಿತಾಂಶ ನೀಡಲು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ರಾಜ್ಯದಲ್ಲೂ ಅಷ್ಟರೊಳಗೆ ಫಲಿತಾಂಶ ನೀಡುತ್ತೇವೆ’ ಎಂದು ಹೇಳಿದರು.

‘ಶೀಘ್ರದಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲ ಬೇಡ, ಅತ್ಯಂತ ಸುರಕ್ಷತಾ ಕ್ರಮ ಗಳೊಂದಿಗೆ ಪರೀಕ್ಷೆ ನಡೆಸಲು ಕೋವಿಡ್ ಕಾರ್ಯಪಡೆ ನೀಡಿರುವ ಮಾರ್ಗಸೂಚಿ ಅನುಸಾರ ಸಿದ್ಧತೆಗಳನ್ನು ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ