Breaking News

13 ವರ್ಷದ ಬಾಲಕನಲ್ಲಿ ರೂಪಾಂತರಿಯ ವಿಚಿತ್ರ ರೋಗ

Spread the love

ದಾವಣಗೆರೆ: ಕೊರೊನಾ ಮೂರನೇ ಅಲೆ ಆತಂಕದ ನಡುವೆ ಇದೀಗ ರಾಜ್ಯದಲ್ಲಿ ಮಕ್ಕಳಲ್ಲಿ ಎ-ನೆಕ್ ಎಂಬ ಅಪರೂಪದ ಕಾಯಿಲೆ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಅಕ್ಯುಟ್ ನೆಕ್ರೋಟೈಜಿಂಗ್ ಎನ್ಸೆಫಲೋಪತಿ(ANEC) ಎಂಬ ಅಪರೂಪದ ಕಾಯಿಲೆ ದೇಶದಲ್ಲಿಯೇ ಮೊದಲ ಬಾರಿಗೆ ಮಕ್ಕಳಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಇಲ್ಲಿನ ಎಸ್.ಎಸ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಹೂವಿನಹಡಗಲಿ ಮೂಲದ 13 ವರ್ಷದ ಬಾಲಕನಲ್ಲಿ ಎ-ನೆಕ್ ಕಾಯಿಲೆ ಪತ್ತೆಯಾಗಿದೆ. ಇದೇ ಆಸ್ಪತ್ರೆಯಲ್ಲಿ ಈ ಕಾಯಿಲೆಯ ರೋಗಲಕ್ಷಣವಿರುವ 6 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, ಗುಣಮುಖರಾಗಿತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಎ-ನೆಕ್ ಕಾಯಿಲೆ ಮಕ್ಕಳಲ್ಲಿನ ಮಿಸ್ಸಿ ರೋಗ ಲಕ್ಷಣದಂತೆಯೇ ಇಅರುತ್ತದೆ. ಆದರೆ ಇದು ಮೆದುಳಿಗೆ ಸಂಬಂಧಪಟ್ಟ ಕಾಯಿಲೆಯಾಗಿದೆ. ಕೋವಿಡ್ ನಿಂದ ಗುಣಮುಖರಾಗುತ್ತಿರುವ ಮಕ್ಕಳಲ್ಲಿ ಈ ರೋಗ ಕಂಡುಬರುತ್ತಿದೆ. ದೆಹಲಿಯ ಏಮ್ಸ್ ನಲ್ಲಿ ವಯಸ್ಕರರೊಬ್ಬರಲ್ಲಿ ಎ-ನೆಕ್ ಕಾಯಿಲೆ ಪತ್ತೆಯಾಗಿತ್ತು. ಇದೀಗ ಮಕ್ಕಳಲ್ಲಿ ಕಂಡುಬರುತ್ತಿರುವುದು ಇದೇ ಮೊದಲು ಎನ್ನಲಾಗಿದೆ


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ