ಬೆಂಗಳೂರು: ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಬಸ್‌ಗಳ ಕಾರ್ಯಚರಣೆ ನಡೆಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ.
ಕರ್ಫ್ಯೂ ಸಂದರ್ಭದಲ್ಲಿ ಬಹಳಷ್ಟು ಚಟುವಟಿಕೆಗಳನ್ನು ನಿಷೇಧಿಸಿರುವುದರಿಂದ ಅವಶ್ಯಕತೆಗಳಿಗೆ ತಕ್ಕಂತೆ ಬಸ್‌ಗಳು ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
‘ನಗರದಲ್ಲಿ ವಾಣಿಜ್ಯ ಚಟುವಟಿಕೆ ಮತ್ತು ಸಾರ್ವಜನಿಕರ ಸಂಚಾರ ನಿರ್ಬಂಧಿಸಿರುವ ಕಾರಣ ಬೆಂಗಳೂರು ನಗರದಲ್ಲಿ ಪ್ರಯಾಣಿಕರ ಸಂಖ್ಯೆಯೂ ಕಡಿಮೆಯಾಗಲಿದೆ. ಸದ್ಯ 4 ಸಾವಿರ ಬಸ್‌ಗಳು ಕಾರ್ಯಾಚರಣೆಯಲ್ಲಿದ್ದು, ಕರ್ಫ್ಯೂ ಸಂದರ್ಭದಲ್ಲಿ ಶೇ 30ರಷ್ಟು ಅಂದರೆ 1,200 ಬಸ್‌ಗಳನ್ನು ಮಾತ್ರ ರಸ್ತೆಗೆ ಇಳಿಸಲಾಗುವುದು’ ಎಂದು ಬಿಎಂಟಿಸಿ ವಿವರಿಸಿದೆ.