ಬೆಂಗಳೂರು, ಜೂನ್ 26: ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮತ್ತೆ ಸಾರಿಗೆ ನೌಕರರು ಮುಷ್ಕರ ನಡೆಸುವ ಸುಳಿವು ಸಿಕ್ಕ ಕಾರಣ, ಪ್ರತಿಭಟನೆ ತಡೆಯಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.
ಈಗಾಗಲೇ ಸಾರಿಗೆ ನಿಗಮ ನಷ್ಟದಲ್ಲಿದೆ ಈ ಸಂದರ್ಭದಲ್ಲಿ ಮತ್ತೆ ಮುಷ್ಕರ ನಡೆಸದರೆ ಮತ್ತಷ್ಟು ನಷ್ಟ ಅನುಭವಿಸಬೇಕಾಗುತ್ತದೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ ಎಂಬುದು ಸರ್ಕಾರ ವಾದವಾಗಿದೆ.
ಜುಲೈ 1ರಿಂದ ಡಿಸೆಂಬರ್ 31ರವರೆಗೆ ಸಾರಿಗೆ ಸಿಬ್ಬಂದಿ ಮುಷ್ಕರವನ್ನು ನಿಷೇಧ ಮಾಡಲಾಗಿದೆ. ಆರ್ಥಿಕತೆಯ ಮೇಲೆ ಕೊವಿಡ್ ಸಾಕಷ್ಟು ಪ್ರಭಾವ ಬೀರಿದೆ. ಈ ಸಂದರ್ಭದಲ್ಲಿ ಮುಷ್ಕರ ಮಾಡುವುದು ಸೂಕ್ತವಲ್ಲ.
ಹೀಗಾಗಿ ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ 3 ಅನ್ವಯ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಿದ್ದರಾಗ್ತಿದ್ದಾರೆ ಎಂಬ ಸುಳಿವು ಸಿಕ್ಕಿತ್ತು.
ಲಾಕ್ಡೌನ್ ಮುಗಿದ ಮೇಲೆ ಜುಲೈ 5 ರ ನಂತ್ರ ಕುಟುಂಬ ಸಮೇತ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಆದರೆ ಅದಕ್ಕೂ ಮೊದಲೇ ಅಗತ್ಯ ಸೇವೆಗಳ ಮುಷ್ಕರವನ್ನ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಉಪವಿಭಾಗ 1ರ ಅನ್ವಯ ಅಗತ್ಯ ಸೇವೆಗಳ ಮುಷ್ಕರವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.