Breaking News

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದುವೆ ನಡೆಸಲು ಅನುಮತಿ: ಜಿಲ್ಲಾಧಿಕಾರಿ

Spread the love

ಮಂಗಳೂರು: ಕೋವಿಡ್‌ ಮಾರ್ಗಸೂಚಿ ಪಾಲನೆಯೊಂದಿಗೆ ಛತ್ರ, ಹೊಟೇಲ್‌, ರೆಸಾರ್ಟ್‌, ಸಭಾಂಗಣಗಳಲ್ಲಿ ಮದುವೆ ಕಾರ್ಯಕ್ರಮ ನಡೆಸಲು ಇಂದಿನಿಂದ ಜಿಲ್ಲೆಯಾದ್ಯಂತ ಅವಕಾಶ ಕಲ್ಪಿಸಲಾಗಿದೆ. ಆದರೆ, 40ಕ್ಕಿಂತ ಹೆಚ್ಚು ಜನರು ಭಾಗವಹಿಸಬಾರದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ,ವಿ. ಆದೇಶ ನೀಡಿದ್ದಾರೆ.

ಮದುವೆ ನಡೆಸುವವರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾಲಿಕೆಯ ಆಯುಕ್ತರು, ಸ್ಥಳೀಯ ಆಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಸ್ಥೆಯ ಮುಖ್ಯಾಧಿಕಾರಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಅಧಿಕಾರಿಗಳ ಪೂರ್ವಾನುಮತಿ ಪಡೆಯಬೇಕು.

ಸಂಬಂಧಪಟ್ಟ ಅಧಿಕಾರಿ 40 ಜನರ ಹೆಸರು ಹೊಂದಿರುವ ಪಾಸ್‌ಗಳನ್ನು ವಿತರಿಸುತ್ತಾರೆ. ಇದನ್ನು ಇತರರಿಗೆ ವರ್ಗಾಯಿಸುವಂತಿಲ್ಲ. ಒಂದು ಸ್ಥಳದಲ್ಲಿ ಒಂದು ಮದುವೆ ಮಾತ್ರ ಆಯೋಜಿಸಬಹುದು ಎಂದು ಸ್ಪಷ್ಟಪಡಿಸಿದ್ದಾರೆ.

ಮಾರ್ಗಸೂಚಿ ಉಲ್ಲಂಘಿಸಿದರೆ ಮದುವೆಯ ಆಯೋಜಕರು, ಆ ಸ್ಥಳದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.


Spread the love

About Laxminews 24x7

Check Also

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಮುನಿಯಪ್ಪ

Spread the loveಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ