Breaking News

ತಂದೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ

Spread the love

ಆನೇಕಲ್ : ತಂದೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಸತೀಶ್​ ರೆಡ್ಡಿ (45), ಮಕ್ಕಳಾದ ಕೀರ್ತಿ(19) , ಮೊನಿಷಾ(17) ಮೃತ ದುರ್ದೈವಿಗಳು. ಸತೀಶ್ ರೆಡ್ಡಿಯವರ ಪತ್ನಿ ಆಶಾ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಚಿಕಿತ್ಸೆಯ ಬಳಿಕವೂ ಅಷ್ಟಾಗಿ ಚೇತರಿಸಿಕೊಳ್ಳದ ಆಶಾ ಮೇ.6 ರಂದು ಸಾವನ್ನಪ್ಪುತ್ತಾರೆ. ಅಮ್ಮ ಚೇತರಿಸಿಕೊಂಡು ಮತ್ತೆ ಮನೆಗೆ ಬರುತ್ತಾರೆ ಎಂದುಕೊಂಡಿದ್ದ ಮಕ್ಕಳಿಗೆ ಅಮ್ಮನಿಲ್ಲದ ಸುದ್ದಿ ದೊಡ್ಡ ಆಘಾತವುಂಟು ಮಾಡುತ್ತದೆ.

ಆಶಾ ಸಾವಿನ ಬಳಿಕ ಸ್ಮಶಾನ ಮೌನದಂತೆ ಇದ್ದ ಸತೀಶ್ ಅವರ ಕುಟುಂಬ ಖಿನ್ನತೆಗೆ ಒಳಗಾಗಿತ್ತು. ಈ ಪರಿಸ್ಥಿತಿಯನ್ನು ನಿಭಾಯಿಸಲಾಗದೆ ತಂದೆ ಸತೀಶ್ ರೆಡ್ಡಿ ಮತ್ತವರ ಮಕ್ಕಳು ಮಂಗಳವಾರ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಅತ್ತಿಬೆಲೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಅವಳಿನಗರದಲ್ಲಿನ 400 ಡ್ರಗ್ ಪೆಡ್ಲರ್ಸ್ ಹಾಗೂ ಸೇವನೆ ಮಾಡುವವರ ಪರೇಡ್

Spread the love ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ