Breaking News

ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುದನ್ನು ರಮೇಶ್ ಜಾರಕಿಹೊಳಿಯವರೇ ಹೇಳಬೇಕು: ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ: ಸ್ವಪಕ್ಷಿಯರೇ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ ಎಂಬ ರಮೇಶ ಜಾರಕಿಹೊಳಿ ಹೇಳಿಕೆಗೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದು ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುದನ್ನು ರಮೇಶ್ ಜಾರಕಿಹೊಳಿಯವರೇ ಹೇಳಬೇಕು ಎಂದಿದ್ದಾರೆ.

ಇಲ್ಲಿನ ತಾಲ್ಲೂಕು ಪಂಚಾಯಿತಿಯಲ್ಲಿ ನರೇಗಾ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ, ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುವುದನ್ನು ರಮೇಶ್ ಜಾರಕಿಹೊಳಿ ಅವರಿಗೆ ನೀವೇ ಕೇಳಬೇಕು ಎಂದರು.

ಸಚಿವ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ದೆಹಲಿ ಭೇಟಿ ವಿಚಾರವಾಗಿ ಮಾತನಾಡಿ, ಅದು ಅವರ ಪಕ್ಷದ ಆಂತರಿಕ ವಿಚಾರ. ಅದನ್ನು ನಾವು ಏನು ಹೇಳಲಿಕ್ಕೆ ಬರುವುದಿಲ್ಲ. ಅದಕ್ಕೂ ನಮಗೂ ಸಂಬಂಧವಿಲ್ಲವೆಂದರು.

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಗೊಂದಲಕ್ಕೆ ಸಂಬಂಧ ಪಟ್ಟಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನಾಯಕತ್ವ ಎಂಬುವುದು ಮುಗಿದು ಹೋಗಿದೆ. ಮುಖ್ಯಮಂತ್ರಿ ಯಾರು ಎಂಬುವುದು 2023 ಮೇ ತಿಂಗಳ ಅಂತ್ಯಕ್ಕೆ ತಿಳಿಯಲಿದೆ. ಈಗ ಚರ್ಚೆ ಮಾಡುವುದು ಅನಾವಶ್ಯಕ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ಪರಿಹಾರ ಮಾಡುವುದಕ್ಕೆ ವರಿಷ್ಠ ನಾಯಕರು ಇದಾರೆ. ಅವರು ಗಮನಿಸುತ್ತಾರೆ. ಇದರ ಮಧ್ಯ ನಾವು ಪ್ರವೇಶ ಮಾಡಿಲ್ಲ ಎಂದು ತಿಳಿಸಿದರು.


Spread the love

About Laxminews 24x7

Check Also

ಸಚಿವ ತಿಮ್ಮಾಪುರ ವಜಾ ಮಾಡದಿದ್ದರೆ ಸಿಎಂಗೆ 85% ಕಮಿಷನ್ ಹೋಗಿದೆ ಎಂದರ್ಥ: ಆರ್. ಅಶೋಕ್

Spread the loveಬೆಂಗಳೂರು: ಸಿದ್ದರಾಮಯ್ಯನವರ ನಿದ್ದೆ ಸರ್ಕಾರ ಇದು. ಭ್ರಷ್ಟಾಚಾರದ ಹೊಳೆಯಲ್ಲಿ ಮಿಂದು ಮೇಯುತ್ತಿದೆ. ಅಬಕಾರಿ ಸಚಿವ ತಿಮ್ಮಾಪುರ ಅವರನ್ನು ವಜಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ