ಬೆಂಗಳೂರು : ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಮೂಲಕ ನಡೆಸಲಾಗುತ್ತಿದ್ದಂತ ಎಸ್ ಡಿ ಎ ಪರೀಕ್ಷೆಯನ್ನು ಕೊರೋನಾ ಕಾರಣದಿಂದಾಗಿ ಮುಂದೂಡಲಾಗಿತ್ತು. ಇಂತಹ ಪರೀಕ್ಷೆಯನ್ನು ನಡೆಸಲು ಇದೀಗ ಕೆಪಿಎಸ್ಸಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದೆ. ಸೆಪ್ಟೆಂಬರ್ 18 ಹಾಗೂ 19ಕ್ಕೆ ಪರೀಕ್ಷಾ ದಿನಾಂಕವನ್ನು ನಿಗದಿ ಪಡಿಸಿದೆ.
ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ದಿನಾಂಕ 29-02-2020ರ ಅಧಿಸೂಚನೆಯಲ್ಲಿ 2019ನೇ ಸಾಲಿನ ರಾಜ್ಯದ ವಿವಿಧ ಇಲಾಖೆಯಲ್ಲಿನ ಉಳಿಕ ಮೂಲ ವೃಂದದ ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ಕಿರಿಯ ಸಹಾಯಕರ/ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಆಯೋಗವು ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷಾ ಪರಿಷ್ಕೃತ ವೇಳಾಪಟ್ಟಿ ಈ ಕೆಳಕಂಡಂತೆ ಪ್ರಕಟಿಸಿದೆ ಎಂಬುದಾಗಿ ತಿಳಿಸಿದ್ದಾರೆ.
ಹೀಗಿದೆ ‘ಎಸ್ ಡಿ ಎ ಪರೀಕ್ಷೆ’ಯ ಪರಿಷ್ಕೃತ ವೇಳಾಪಟ್ಟಿ
- ದಿನಾಂಕ 18-09-2021ರ ಶನಿವಾರ ಬೆಳಿಗ್ಗೆ 10 ರಿಂದ 11.30ರವರೆಗೆ – ಪತ್ರಿಕೆ -1 : ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ
- ದಿನಾಂಕ 19-09-2021ರ ಭಾನುವಾರ ಬೆಳಿಗ್ಗೆ 10 ರಿಂದ 11.30ರವರೆಗೆ ಪತ್ರಿಕೆ-3 – ಸಾಮಾನ್ಯ ಜ್ಞಾನ. ಪತ್ರಿಕೆ -2 ಮಧ್ಯಾಹ್ನ 2 ರಿಂದ 3.30ರವರೆಗೆ – ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್.