Breaking News
Home / ಜಿಲ್ಲೆ / ವಿಜಯಪುರ ಜಿಲ್ಲಾಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು; ನಗರದ ಹಲವೆಡೆ ಸೀಲ್​​ಡೌನ್​

ವಿಜಯಪುರ ಜಿಲ್ಲಾಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು; ನಗರದ ಹಲವೆಡೆ ಸೀಲ್​​ಡೌನ್​

Spread the love

ವಿಜಯಪುರ(ಏ.12): ವಿಜಯಪುರದಲ್ಲಿ ಕೊರೋನಾ ಭೀತಿ ಹೆಚ್ಚಾದ ಹಿನ್ನೆಲೆ, ಜಿಲ್ಲಾಡಳಿತವು ಕಟ್ಟೆಚ್ಚರ ವಹಿಸಿದೆ. ಕೊರೋನಾ ನಿಗ್ರಹಕ್ಕಾಗಿ ಹಲವಾರು ಮುಂಜಾಗ್ರತಾ ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ವಿಜಯಪುರ ಜಿಲ್ಲಾಡಳಿತವು ತೆಗೆದುಕೊಂಡಿದೆ. ಈಗ ವಿಜಯಪುರ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಾಡು ಮಾಡಿದೆ.

ಹೌದು, ವಿಜಯಪುರ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಡಿಸಿದೆ. ಹೀಗಾಗಿ ಜಿಲ್ಲಾಸ್ಪತ್ರೆಯಲ್ಲಿದ್ದ ಎಲ್ಲಾ ರೋಗಿಗಳನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿದೆ. ಈ ಜಿಲ್ಲಾಸ್ಪತ್ರೆಯಲ್ಲಿ ಸುಮಾರು 150ಕ್ಕೂ ಹೆಚ್ಚು ರೋಗಿಗಳಿದ್ದು, ಅವರನ್ನು ನಗರದ ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಜನರಲ್ ವಾರ್ಡ್, ಡಯಾಲಿಸಿಸ್ ವಾರ್ಡ್​​ ಸೇರಿದಂತೆ ನಾನಾ ವಾರ್ಡ್​​ಗಳ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿದೆ. ಈ ಸ್ಥಳಾಂತರ ಪ್ರಕ್ರಿಯೆ ನಿನ್ನೆ ಮಧ್ಯರಾತ್ರಿವರೆಗೆ ನಡೆದಿದೆ. ವಿಜಯಪುರ ಕೋವಿಡ್ ಆಸ್ಪತ್ರೆಯಲ್ಲಿ 200 ಹಾಸಿಗೆಗಳ ಸೌಲಭ್ಯ ಕಲ್ಪಿಸಲಾಗಿದೆ. 

ಇನ್ನು, ವಿಜಯಪುರ ನಗರದ ಗೋಳಗುಮ್ಮಟ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗಿದೆ. ಪೊಲೀಸರು ಹಲವು ಬಡಾವಣೆಗಳನ್ನು ಲಾಕಡೌನ್ ಮಾಡಿದ್ದಾರೆ. ಈ ಬಡಾವಣೆಗಳಿಗೆ ಯಾರೂ ಹೋಗುವಂತಿಲ್ಲ, ಯಾರೂ ಬರುವಂತಿಲ್ಲ ಎಂದು ಸೂಚಿಸಿ, ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ