Breaking News

ಕೊರೋನಗೆ ಪೋಷಕರು ಬಲಿ ; ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ ರೇಣುಕಾಚಾರ್ಯ

Spread the love

ದಾವಣಗೆರೆ: ಕೊರೊನಾ ಎರಡನೇ ಅಲೆಯಲ್ಲಿ ಸಾಕಷ್ಟು ಸಮಾಜ ಮುಖಿ ಕೆಲಸ ಮಾಡುವ ಮೂಲಕ ಮನೆ ಮಾತಾಗಿರುವ ಶಾಸಕ ಎಂ.ಪಿ ರೇಣುಕಾಚಾರ್ಯರವರು ಇದೀಗ ಅದೇ ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ದೊಡ್ಡೇರಹಳ್ಳಿ ಗ್ರಾಮದ ಬಾಲಕಿ ಕೊರೊನಾದಿಂದ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ಶಾಸಕ ಎಂಪಿ ರೇಣುಕಾಚಾರ್ಯ ಇಂದು ಅ ಗ್ರಾಮಕ್ಕೆ ಪತ್ನಿ ಸುಮಿತ್ರಾರವರೊಂದಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಕೆಲ ವರ್ಷಗಳ ಹಿಂದೆ ತಾಯಿಯನ್ನು ಕಳೆದುಕೊಂಡು ಎರಡು ತಿಂಗಳ ಹಿಂದೆ ಕೋವಿಡ್ ನಿಂದ ತಂದೆಯನ್ನು ಕಳೆದುಕೊಂಡಿದ್ದ ಬಾಲಕಿಗೆ ಆರ್ಥಿಕ ಸಹಾಯ ಕೂಡ ಮಾಡಿದರು. ಬಳಿಕ ಬಾಲಕಿಯ ಸಂಬಂಧಿಕರು ಒಪ್ಪಿದರೆ ದತ್ತು ಪಡೆದು ತಂದೆ, ತಾಯಿ ಸ್ಥಾನದಲ್ಲಿ ನಿಂತು ಮುಂದಿನ ವಿದ್ಯಾಭ್ಯಾಸವನ್ನು ಕೊಡಿಸುವುದಾಗಿ ತಿಳಿಸಿದರು. ಅಲ್ಲದೇ ಪೋಷಕರನ್ನು ಕಳೆದುಕೊಂಡಿದ್ದ ಬಾಲಕಿಯನ್ನು ರೇಣುಕಾಚಾರ್ಯ ದಂಪತಿ ಬಾಚಿ ತಬ್ಬಿಕೊಂಡು ಸಾಂತ್ವನ ಹೇಳಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ