ದಾವಣಗೆರೆ: ರಾಜ್ಯದ 20 -25 ಪರ್ಸೆಂಟ್ ಬಿಜೆಪಿ ಸರ್ಕಾರದಲ್ಲಿ ಲಂಚ ಇಲ್ಲದೇ ಯಾವ ಕೆಲಸವೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, “ವಿಜಯೇಂದ್ರ ಡಿ ಪ್ಯಾಕ್ಟರ್ ಸಿಎಂ. ಯಡಿಯೂರಪ್ಪ ಡಿ ಜೀರೋ ಸಿಎಂ. ಸರ್ಕಾರದಲ್ಲಿ ಲಂಚ ನಡೆಯುತ್ತಿರುವುದು ಸತ್ಯ. ಯಡಿಯೂರಪ್ಪನವರ ಮಗ ಹಾಗು ಅಳಿಯ ಬ್ಯಾಂಕ್ ಮುಖಾಂತರ ಲಂಚ ತೆಗೆದು ಕೊಳ್ಳುತ್ತಿದ್ದಾರೆ. ಯಡಿಯೂರಪ್ಪನವರ ಇಡೀ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದ್ದಾರೆ.
ಸಮಾಜ ಕಲ್ಯಾಣ ಸಚಿವರ ಆಪ್ತ ಸಹಾಯಕ ಅರೆಸ್ಟ್ ಆಗಿದ್ದಾನೆ. ಯಡಿಯೂರಪ್ಪನವರ ಮಗ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
Laxmi News 24×7