Breaking News

ಪಕ್ಷ ಬಿಟ್ಟು ಹೋದವರು ಬೇಕಾದರೆ ಮತ್ತೆ ಪಕ್ಷ ಸೇರಲು ಅರ್ಜಿ ಹಾಕಬಹುದು: ಡಿ ಕೆ ಶಿವಕುಮಾರ್

Spread the love

ಬೆಂಗಳೂರು: ಕಾಂಗ್ರೆಸ್ ಪಕ್ಷ, ಸಿದ್ಧಾಂತ, ನಾಯಕತ್ವ, ಕೆಲಸದ ಮೇಲೆ ನಂಬಿಕೆ ಇದೆಯೋ ಅಂತಹ ಯಾರೂ ಬೇಕಾದರೂ ಕಾಂಗ್ರೆಸ್ ಪಕ್ಷ ಸೇರಿಕೊಳ್ಳಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸೇರ್ಪಡೆ ಕುರಿತು ಆಪರೇಷನ್ ಕಮಲ ಕಾರ್ಯಾಚರಣೆಯಡಿ ಬಿಜೆಪಿಗೆ ಹೋದವರು ನಮ್ಮನ್ನು ಸಂಪರ್ಕಿಸಿಲ್ಲ. ಆದರೆ ಅವರೂ ಸೇರಿದಂತೆ ಯಾರು ಬೇಕಾದರೂ ಕಾಂಗ್ರೆಸ್ ಸೇರ್ಪಡೆಗೆ ಅರ್ಜಿ ಹಾಕಬಹುದು. ಸ್ಥಳೀಯ ನಾಯಕರು ಒಪ್ಪಿದರೆ ಅವರನ್ನು ಸೇರಿಸಿಕೊಳ್ಳಲಾಗುವುದು ಎಂದರು.

ಯಾರು ಬೇಕಾದರೂ ಪಕ್ಷಕ್ಕೆ ಬರಬಹುದು. ಈ ಬಗ್ಗೆ ಅರ್ಜಿ ಹಾಕಲಿ. ಸ್ಥಳೀಯ ನಾಯಕರು ಸೇರಿ ಎಲ್ಲರೂ ಪರಿಶೀಲಿಸಿ ಅವರ ಸೇರ್ಪಡೆ ಬಗ್ಗೆ ಕ್ರಮಕೈಗೊಳ್ಳುತ್ತೇವೆ. ಯಾವದೇ ಗೊಂದಲ ಆಗಬಾರದು ಅದಕ್ಕಾಗಿ ಎಲ್ಲರ ಒಪ್ಪಿಗೆಯೊಂದಿಗೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದರು.

ಬಿಜೆಪಿಗೆ ಸೇರ್ಪಡೆಯಾದ 17 ಜನರಲ್ಲಿ ಯಾರೂ ಅರ್ಜಿ ಹಾಕಿಲ್ಲ, ಬೇರೆಯವರು ಇಬ್ಬರು ಹಾಕಿದ್ದಾರೆ. ರಾಜಕೀಯದಲ್ಲಿ ಪಕ್ಷ ಬಿಟ್ಟು ಹೋಗುವುದು ಬರುವುದು ಸಾಮಾನ್ಯ. ಹಾಗಾಗಿ ಯಾರೂ ಬೇಕಾದರೂ ಅರ್ಜಿ ಹಾಕಲಿ ಎಂದು ಡಿ ಕೆ ಶಿವಕುಮಾರ್ ಹೇಳಿದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ