Breaking News
Home / ರಾಜಕೀಯ / ಎಂಎಸ್‌ಎಂಇಗಳಿಗೆ ಶೇ 30ರಷ್ಟು ಜಮೀನು: ಜಗದೀಶ ಶೆಟ್ಟರ್‌

ಎಂಎಸ್‌ಎಂಇಗಳಿಗೆ ಶೇ 30ರಷ್ಟು ಜಮೀನು: ಜಗದೀಶ ಶೆಟ್ಟರ್‌

Spread the love

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ಯಿಂದ ಅಭಿವೃದ್ಧಿಪಡಿಸುತ್ತಿರುವ ಕೈಗಾರಿಕಾ ಪ್ರದೇಶಗಳಲ್ಲಿ ಶೇಕಡ 30ರಷ್ಟು ಜಮೀನನ್ನು ಮಧ್ಯಮ, ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳಿಗೆ (ಎಂಎಸ್‌ಎಂಇ) ಮೀಸಲಿಡಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ತಿಳಿಸಿದರು.

ಕ್ರೆಡೈ ಕರ್ನಾಟಕ ವತಿಯಿಂದ ಶನಿವಾರ ಆಯೋಜಿಸಿದ್ದ ‘ಕ್ರೆಡೈ ಜ್ಞಾನ ಸರಣಿ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಾಜ್ಯದ ಅಭಿವೃದ್ಧಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ಮಹತ್ವದ್ದು. ಮಧ್ಯಮ, ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳಿಗೆ ಹೆಚ್ಚು ಉತ್ತೇಜನ ನೀಡಲಾಗುವುದು. ಅದನ್ನು ಈ ವಲಯದ ಉದ್ಯಮಿಗಳು ಬಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಕ್ಲಸ್ಟರ್‌’ ಅಭಿವೃದ್ಧಿ ಯೋಜನೆ ಅನುಷ್ಠಾನಕ್ಕೆ ಹೊಸ ಕೈಗಾರಿಕಾ ನೀತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ