Breaking News

ಯುವಕ ಮಂಡಳಗಳಿಗೆ ಕ್ರೀಡಾ ಸಾಮಗ್ರಿ ವಿತರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ

Spread the love

 

 

ಗೋಕಾಕ : ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳ ಯುವಕ ಮಂಡಳಗಳಿಗೆ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ನೀಡಿದ ಕ್ರೀಡಾ ಸಾಮಗ್ರಿಗಳನ್ನು ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಇಂದು ವಿತರಿಸಿದರು.

 

ಹುಕ್ಕೇರಿ ತಾಲ್ಲೂಕಿನ ಬಗರನಾಳ ಗ್ರಾಮದ ಗಜಾನನ ಯುವ ಮಂಡಳ, ಶಹಾಬಂದರದ ಮೆಹಬೂಬ ಸುಬಾನಿ ಯುವಕ ಮಂಡಳ, ಬೆಳಗಾವಿ ತಾಲ್ಲೂಕಿನ ಮುಚ್ಚಂಡಿ ಗ್ರಾಮದ ಅಮರಜ್ಯೋತಿ ಯುವಕ ಮಂಡಳಕ್ಕೆ ಕ್ರೀಡಾ ಸಾಮಗ್ರಿಗಳನ್ನು ಮಂಡಳದ ಮುಖಂಡರಿಗೆ ಹಸ್ತಾಂತರಿಸಿದರು.

 

ಬಳಿಕ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿ, ಮೊದಲಿಂದಲೂ ಕ್ರೀಡೆ ಹಾಗೂ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಾ ಬರುತ್ತೇವೆ. ಇದಕ್ಕೆ ಕಾರಣ ಗ್ರಾಮೀಣ ಪ್ರದೇಶ ಪ್ರತಿಭೆಗಳನ್ನು ಗುರುತಿಸಿ, ಬೆಳೆಸುವ ಉದ್ದೇಶವಾಗಿದೆ.  ಈಗ ನೀಡಿರುವ ಕ್ರೀಡಾ ಸಾಮಗ್ರಿಗಳನ್ನು ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ