Breaking News

ನಲಪಾಡ್‌ಗೂ ಯುವ ಕಾಂಗ್ರೆಸ್‌ ಅಧ್ಯಕ್ಷ ಪಟ್ಟ : ಹುದ್ದೆ ಕೊಡಿಸುವಲ್ಲಿ ಡಿಕೆಶಿ ಯಶಸ್ವಿ

Spread the love

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷಗಿರಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವ ಕುಮಾರ್‌ ಮೇಲುಗೈ ಸಾಧಿಸಿದ್ದು, ಮುಂದಿನ ಜನವರಿಯಲ್ಲಿ ಮಹಮದ್‌ ನಲಪಾಡ್‌ಗೆ ಪಟ್ಟ ಸಿಗಲಿದೆ.

ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌ ಈ ಕುರಿತು ಅಧಿಕೃತ ಪ್ರಕಟನೆ ಹೊರಡಿಸಿದ್ದು, ರಕ್ಷಾ ರಾಮಯ್ಯ 2022ರ ಜ. 31ರ ವರೆಗೆ ಅಧ್ಯಕ್ಷರಾಗಿರಲಿದ್ದು, ಅನಂತರ ನಲಪಾಡ್‌ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದಿದ್ದಾರೆ.
ವಾರದ ಹಿಂದೆ ರಾಜಿ ಸಂಧಾನ ಏರ್ಪಟ್ಟು ಡಿಸೆಂಬರ್‌ವರೆಗೆ ರಕ್ಷಾ ರಾಮಯ್ಯ ಅಧ್ಯಕ್ಷರಾಗಿ ಮುಂದುವರಿಯಲಿದ್ದು, ಬಳಿಕ ನಲಪಾಡ್‌ಗೆ ಅಧಿಕಾರ ಬಿಟ್ಟುಕೊಡುವ ಬಗ್ಗೆ ಒಪ್ಪಂದವಾಗಿತ್ತು. ಆದರೆ ಮರುದಿನ ರಾಷ್ಟ್ರೀಯ ಯುವ ಕಾಂಗ್ರೆಸ್‌ ವೆಬ್‌ಸೈಟ್‌ನಲ್ಲಿ ಇದು ಸತ್ಯಕ್ಕೆ ದೂರ ಎಂದು ಸ್ಪಷ್ಟನೆ ನೀಡಲಾಗಿತ್ತು.

ಸಿದ್ದರಾಮಯ್ಯ ಬಣ ಹೈಕಮಾಂಡ್‌ ಮೇಲೆ ಒತ್ತಡ ಹೇರಿ ರಕ್ಷಾ ಮುಂದುವರಿಯುವಂತೆ ನೋಡಿಕೊಂಡಿತ್ತು. ಆದರೆ ಡಿ.ಕೆ.ಶಿ. ಪಟ್ಟುಬಿಡದೆ ಮಹಮದ್‌ ನಲಪಾಡ್‌ಗೆ ಅಧ್ಯಕ್ಷಗಿರಿ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ