Breaking News
Home / Uncategorized / ಸುಗಮವಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪೂರ್ಣಗೊಳಿಸುವ ವಿಶ್ವಾಸವಿದೆ: ಶಶಿಕಲಾ ಜೊಲ್ಲೆ

ಸುಗಮವಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪೂರ್ಣಗೊಳಿಸುವ ವಿಶ್ವಾಸವಿದೆ: ಶಶಿಕಲಾ ಜೊಲ್ಲೆ

Spread the love

ಚಿಕ್ಕೋಡಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹಿನ್ನೆಲೆ ಅಧಿಕಾರಿಗಳು, ಶಿಕ್ಷಕರು ಮತ್ತು ಇತರೆ ಸಿಬ್ಬಂದಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಿ ಸುಗಮವಾಗಿ ಪರೀಕ್ಷೆ ಪೂರ್ಣಗೊಳಿಸುವ ವಿಶ್ವಾಸ ಇದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕಾರ್ಯದಲ್ಲಿ ತೊಡಗುವ ಶಿಕ್ಷಕರು ಹಾಗೂ ಅಧಿಕಾರಿಗಳಿಗೆ ಕೋವಿಡ್ ಲಸಿಕೆ ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಮೂರನೇ ಅಲೆ ಮಕ್ಕಳ ಮೇಲೆ ಪ್ರಭಾವ ಬೀರಲಿದೆ ಎಂಬ ತಜ್ಞರ ಸೂಚನೆ ಮೇರೆಗೆ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಸಜ್ಜಾಗಿದೆ. ಈಗಾಗಲೇ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಸಕಾಲಕ್ಕೆ ಲಸಿಕೆ ಪೂರೈಸಲು ಕ್ರಮ ಜರುಗಿಸುವಂತೆ ಮನವಿ ಮಾಡಲಾಗಿದೆ. ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸೋಂಕು ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಲಸಿಕೆ ಪಡೆಯಬೇಕು ಎಂದರು. 

 

ಕ್ಷೇತ್ರ ಶಿಕ್ಷಣಾಧಿಕಾರಿ ರೇವತಿ ಮಠದ ಮಾತನಾಡಿ, ತಾಲೂಕಿನಲ್ಲಿರುವ ಶಿಕ್ಷಕರು ಕೊಗನೋಳಿ ಚೆಕ್ ಪೋಸ್ಟ್ ಬಳಿ ಸೇವೆ ಸಲ್ಲಿಸುವ ಜೊತೆಗೆ ಕೊರೊನಾ ವೈರಸ್ ಹೋಗಲಾಡಿಸಲು ಮಾಡಿದ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಗಡಾದ, ತಾಲೂಕು ವೈದ್ಯಾಧಿಕಾರಿ ಡಾ.ವಿಶ್ಚಲ ಶಿಂಧೆ, ಮುಖ್ಯ ವೈದ್ಯಾಧಿಕಾರಿ ಡಾ.ಸೀಮಾ ಗುಂಜಾಳ, ಉಪಾಧ್ಯಕ್ಷೆ ನೀತಾ ಬಾಗಡಿ, ಸದಸ್ಯ ರಾಜು ಟಾ, ಸಂತಾ ಸಾಂಗಾವಕರ, ಆಶಾ ಅವಳ ತಂಪಾಸನಾ ಗಾರವೆ, ದೀಪಾಲಿ, ದತ್ತಾ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಉಚಿತ ಭಾಗ್ಯ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿ

Spread the love Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ