ಕಾಂಗ್ರೆಸ್ ನಲ್ಲಿ ಮುಂದುವರಿದ ಸಿಎಂ ಫೈಟ್; ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಎಂದ ನಲಪಾಡ್

Spread the love

ಉಡುಪಿ: ಕಾಂಗ್ರೆಸ್ ಪಾಳಯದಲ್ಲಿ ಸ್ವಲ್ಪ ತಣ್ಣಗಾಗಿದ್ದ ಸಿಎಂ ಅಭ್ಯರ್ಥಿ ವಿಚಾರ ಇದೀಗ ಮತ್ತೆ ತಾರಕಕ್ಕೇರಿದೆ. ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಯೂತ್ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಹೇಳಿಕೆ ನೀಡಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ನಲಪಾಡ್, ಕೋವಿಡ್ ನಂತಹ ಸಂಕಷ್ಟದ ಸಂದರ್ಭದಲ್ಲಿ ನಿಮಗೆ ಯಾರೂ ಸಹಾಯ ಮಾಡಿಲ್ಲ ಕಾಂಗ್ರೆಸ್ ಮಾತ್ರ ನಿಮ್ಮ ಕಷ್ಟಕ್ಕೆ ಸ್ಪಂದಿಸಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದಾರೆ.

ನಲಪಾಡ್ ಅವರ ಈ ಹೇಳಿಕೆ ಇದೀಗ ಕೈ ಪಾಳಯದಲ್ಲಿ ಮತ್ತೆ ಹೊಸ ಚರ್ಚೆಗೆ ಗ್ರಾಸವಾಗಿದೆ.


Spread the love

About Laxminews 24x7

Check Also

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Spread the loveಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ