ಬೆಂಗಳೂರು: ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ವಿಧಿಸಿದ್ದ ಲಾಕ್ ಡೌನ್ ತೆರವುಗೊಳಿಸುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯದ 12 ನಗರಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ವಾಹನಗಳ ಓಡಾಟ ಹೆಚ್ಚುತ್ತಿದ್ದಂತೆ ಮಾಲಿನ್ಯದ ಪ್ರಮಾಣವೂ ಹೆಚ್ಚುತ್ತಿದೆ. ಮಹಾ ನಗರಗಳಲ್ಲಿ ನೈಟ್ರೋಜನ್ ಡೈ ಆಕ್ಸೈಡ್ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ. ಲಾಕ್ ಡೌನ್ ಅವಧಿಯಲ್ಲಿ ಕಡಿಮೆ ಇದ್ದ ವಾಹನ ಸಂಚಾರ ಏಕಾ ಏಕಿ ಹೆಚ್ಚಿದೆ. ಕಾರ್ಖಾನೆಗಳ ಕೆಲಸ ಆರಂಭವಾಗುತ್ತಿದ್ದಂತೆ ಮಾಲಿನ್ಯದ ಪ್ರಮಾಣವೂ ಗಣನೀಯವಾಗಿ ಏರಿಕೆಯಾಗಿದೆ. ಈ ಕುರಿತು ಗ್ರಿನ್ ಪೀಸ್ ಇಂಡಿಯಾದ ಸಮೀಕ್ಷೆಯಲ್ಲಿ ವರದಿಯಾಗಿದೆ.
