Breaking News

ದೇಶದಲ್ಲಿಂದು 45,892 ಜನರಿಗೆ ಕೊರೋನಾ. 817 ಜನ ಸಾವು!

Spread the love

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 45,892 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 817 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 07 ಲಕ್ಷದ 09 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,05,028 ಆಗಿದೆ.

ಕಳೆದ 24 ಗಂಟೆಗಳಲ್ಲಿ 44,291 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2 ಕೋಟಿ 98 ಲಕ್ಷದ 43 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 4 ಲಕ್ಷದ 60 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 97.18 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.32 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 18.93 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 42.52 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ33.81 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 36.48 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ