Breaking News

ಮತ್ತೆ ಪೆಟ್ರೋಲ್ ಬೆಲೆ ಏರಿಕೆ : ದೇಶದಲ್ಲಿ ಇಂದು ತೈಲ ಬೆಲೆ ಎಲ್ಲೆಲ್ಲಿ, ಎಷ್ಟಿದೆ ನೋಡಿ

Spread the love

ನವದೆಹಲಿ : ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು ಮತ್ತೊಮ್ಮೆ ಏರಿಕೆಯಾಗಿದ್ದು ಪೆಟ್ರೋಲ್ ಮತ್ತು ಡೀಸೆಲ್‌ನ ಬೆಲೆಯನ್ನು ಜುಲೈ 9 ರಂದು ಸರ್ಕಾರಿ ತೈಲ ಕಂಪನಿಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಕೊಂಡೊಯ್ದಿವೆ.

ರಾಜಸ್ಥಾನದ ಗಂಗಾನಗರದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್ ಬೆಲೆ 112 ರೂ.ಗೆ ಏರಿಕೆಯಾಗಿದೆ. ಚೆನ್ನೈ, ದೆಹಲಿ, ಕೋಲ್ಕತಾ, ಮುಂಬೈ ಮತ್ತು ಬೆಂಗಳೂರಿನ ನಾಲ್ಕು ಪ್ರಮುಖ ಮೆಟ್ರೋ ನಗರಗಳಲ್ಲಿ ಈಗಾಗಲೇ ಪೆಟ್ರೋಲ್‌ 100ರ ಗಡಿ ದಾಟಿದೆ.

 

ಮುಂಬಯಿಯಲ್ಲಿ ಪೆಟ್ರೋಲ್‌ ಬೆಲೆ 106.59 ರೂ.ಗೆ ಏರಿದೆ. ಇದು ನಿನ್ನೆಯ ಬೆಲೆಯಿಂದ 34 ಪೈಸೆಗಳ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ100.56 ಮತ್ತು ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 100.62 ರೂ. ಇದೆ. ಇನ್ನೂ ದೆಹಲಿಯ ಪೆಟ್ರೋಲ್ ಬೆಲೆ ಸಹ 35 ಪೈಸೆ ಹೆಚ್ಚಾಗಿದೆ.

ಚೆನ್ನೈ ನಲ್ಲಿ ಪೆಟ್ರೋಲ್ ಬೆಲೆ 101.37 ರೂ. ಇದ್ದು, ಬೆಂಗಳೂರು ಪೆಟ್ರೋಲ್ ದರವನ್ನು ಪ್ರತಿ ಲೀಟರ್‌ಗೆ 103.93 ರೂ. ಆಗಿದ್ದು, 37 ಪೈಸೆ ಹೆಚ್ಚಳವಾಗಿದೆ. ದೇಶದ ಹಲವು ರಾಜ್ಯಗಳಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 103.93 ರೂ. ದಾಟಿದೆ. ಕರ್ನಾಟಕದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ 103 ರೂ. ದಾಟಿದೆ.

 


Spread the love

About Laxminews 24x7

Check Also

ಬಂಡಾರದ ಜಾತ್ರೆ; ತಂದೆ ಚಿಕ್ಕಪ್ಪ, ಸ್ನೇಹಿತರೊಂದಿಗೆ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ

Spread the loveಬಂಡಾರದ ಜಾತ್ರೆ; ತಂದೆ ಚಿಕ್ಕಪ್ಪ, ಸ್ನೇಹಿತರೊಂದಿಗೆ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ ಜುಲೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ