Breaking News

ಕೋವಿಡ್: ಮೃತ ಪತ್ರಕರ್ತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ

Spread the love

ಬೆಂಗಳೂರು: ಕೋವಿಡ್ 19 ಸೋಂಕಿಗೆ ಸಿಲುಕಿ ಸಾವನ್ನಪ್ಪಿದ ಇಬ್ಬರು ಪತ್ರಕರ್ತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಿತ್ತು. ಇದೀಗ ಮನವಿ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪರಿಹಾರವನ್ನು ಮಂಜೂರು ಮಾಡಿದ್ದಾರೆ.

ಕಲಬುರ್ಗಿ ಜಿಲ್ಲೆಯ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ ಮತ್ತು ಕೊಡಗು ಜಿಲ್ಲೆಯ ವಿರಾಜಪೇಟೆಯ ಮೈಸೂರು ಮಿತ್ರ ಪತ್ರಿಕೆಯ ವರದಿಗಾರ ಎಸ್.ಎಂ.ಚೆಂಗಪ್ಪ ಅವರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರು. ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ದೊರೆಯಲಿದೆ.

ಪತ್ರಕರ್ತರಾದ ಜಯತೀರ್ಥ ಕಾಗಲಕರ ಅವರಿಗೆ ಪರಿಹಾರ ನೀಡುವಂತೆ ಕಲಬುರಗಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮತ್ತು ಎಸ್.ಎಂ.ಚೆಂಗಪ್ಪ ಅವರಿಗೆ ಪರಿಹಾರ ಮಂಜೂರು ಮಾಡುವಂತೆ ಕೊಡಗು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘಗಳು, ರಾಜ್ಯ ಸಂಘಕ್ಕೆ ಮನವಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿ ಪರಿಹಾರ ಮಂಜೂರು ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಭಿನಂದನೆ ತಿಳಿಸಲಾಗಿದೆ.


Spread the love

About Laxminews 24x7

Check Also

‘I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್.

Spread the loveಬೆಂಗಳೂರು:ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ಅವರು ತಮ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ