Breaking News

ಬೆಳಗಾವಿ ಮಹಾನಗರ ಪಾಲಿಕೆಯಿಂದ 58 ವಾರ್ಡುಗಳ ವಾರ್ಡ್ ವಾರು ಅಂತಿಮ ಮತದಾರರ ಪಟ್ಟಿ ಪ್ರಕಟ

Spread the love

ಬೆಳಗಾವಿ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯ 58 ವಾರ್ಡುಗಳ ವಾರ್ಡ್ ವಾರು ಅಂತಿಮ ಮತದಾರರ ಪಟ್ಟಿಯನ್ನು ಜುಲೈ 9 2021ರಂದು ಪ್ರಕಟಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ

ದಿನಾಂಕ: 01-01-2021ರ ಅರ್ಹತಾ ದಿನಾಂಕಕ್ಕೆ ಪರಿಷ್ಕರಣೆ ಯಾದ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ದಿನಾಂಕ 18-01-2021ರ ಮತದಾರರ ಪಟ್ಟಿಯ ಡೇಟಾ ಪಡೆದುಕೊಂಡು ಬೆಳಗಾವಿ ಮಹಾನಗರಪಾಲಿಕೆಯ 58 ವಾರ್ಡಗಳು ವಾರ್ಡವಾರು ಕರಡು ಮತದಾರರ ಪಟ್ಟಿಯನ್ನು ಸಿದ್ದಪಡಿಸಿ ದಿನಾಂಕ 28-06-2021ರಂದು ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿ, ತಾಲೂಕು ಕಚೇರಿ, ಮಹಾನಗರಪಾಲಿಕೆಯ ಕಚೇರಿ ಹಾಗೂ ಮತಗಟ್ಟೆ ವ್ಯಾಪ್ತಿಗಳಲ್ಲಿ ಪ್ರಚುರಪಡಿಸಿ ಸಾರ್ವಜನಿಕರಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ 01-7-2021 ರ ವರೆಗೆ ಅವಕಾಶ ನೀಡಲಾಗಿತ್ತು.

ಸದರಿ ದಿನಾಂಕದೊಳಗಾಗಿ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ, ಮುದ್ರಕರಿಂದ ಬದಲಾವಣೆಗಳನ್ನು ಮಾಡಿಸಿ, ಚೆಕ್ ಲಿಸ್ಟ್ ಪರಿಶೀಲಿಸಿ ಬೆಳಗಾವಿ ಮಹಾನಗರಪಾಲಿಕೆಯ 58 ವಾರ್ಡುಗಳ ಅಂತಿಮ ಮತದಾರರ ಪಟ್ಟಿಯನ್ನು ಜುಲೈ 9 ರಂದು ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿ, ತಾಲೂಕ ಕಚೇರಿ, ಮಹಾನಗರ ಪಾಲಿಕೆ ಕಚೇರಿ, ಹಾಗೂ ಮತಗಟ್ಟೆ ವ್ಯಾಪ್ತಿಯಲ್ಲಿ ಪ್ರಚುರಪಡಿಸಲಾಗಿದೆ ಎಂದು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಭೀಕರ ಅಪಘಾತ…ಹಿಂಬದಿಯಿಂದ ಗುದ್ದಿದ ಬಸ್…ಲಾರಿ ಪಲ್ಟಿ!!!

Spread the love ಭೀಕರ ಅಪಘಾತ…ಹಿಂಬದಿಯಿಂದ ಗುದ್ದಿದ ಬಸ್…ಲಾರಿ ಪಲ್ಟಿ!!! ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ದುರ್ಘಟನೆ ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ