Breaking News

ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಸಿಬ್ಬಂದಿ ಎಸಿಬಿ ಬಲೆಗೆ

Spread the love

ಚಿಕ್ಕೋಡಿ: ಅನಧಿಕೃತ ಪಾನ್‌ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ ಎಂದು ಹೆದರಿಸಿ, ಮಾಲೀಕನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸದಲಗಾ ಪೊಲೀಸ್‌ ಠಾಣೆಯ ಪಿಎಸ್‌ಐ ಹಾಗೂ ಇಬ್ಬರು ಪೊಲೀಸ್‌ ಪೇದೆಗಳು ಭ್ರಷ್ಟಾಚಾರ ನಿಗೃಹ ದಳ(ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.

ಗುರುವಾರ ರಾತ್ರಿ ಠಾಣೆ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು 40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ ಕುಮಾರ ಹಿತ್ತಲಮನಿ ಹಾಗೂ ಕಾನ್ಸಟೇಬಲ್‌ ಮಾಯಪ್ಪಾ ಗಡ್ಡೆ ಮತ್ತು ಶ್ರೀಶೈಲ ಮಂಗಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಸರ್ಕಾರದ ಅಗತ್ಯ ಪರವಾನಗಿ ಪಡೆದು ಗಡಿಗ್ರಾಮ ಬೋರಗಾಂವದಲ್ಲಿ ಪಾನ್‌ ಮಸಾಲಾ ಕಾರ್ಖಾನೆ ನಡೆಸುತ್ತಿದ್ದ ಇಚಲಕರಂಜಿ ಮೂಲದ ರಾಜು ಪಾಶ್ಚಾಪುರೆ ಅವರನ್ನು ಹೆದರಿಸಿದ್ದ ಪಿಎಸ್‌ಐ ಮತ್ತು ಪೇದೆಗಳು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕಾರ್ಖಾನೆ ಮಾಲೀಕ ಎಸಿಬಿಗೆ ದೂರು ಸಲ್ಲಿಸಿದ್ದರು.

ದೂರಿನ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಠಾಣೆಯ ಮೇಲೆ ದಾಳಿ ನಡೆಸಿ ಪೊಲೀಸರನ್ನು ಬಲೆಗೆ ಕೆಡವಿದ್ದಾರೆ. ಎಸಿಬಿ ಎಸ್ಪಿ ಬಿ.ಎಸ್‌.ನ್ಯಾಮಗೌಡರ ಮಾರ್ಗದರ್ಶನ ಮತ್ತು ಡಿವೈಎಸ್ಪಿ ಜೆ.ಎಂ. ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್‌ ಗಳಾದ ಎಚ್‌ ಸುನೀಲಕುಮಾರ, ಎ.ಎಸ್‌.ಗುದಿಗೊಪ್ಪ, ಧಾರವಾಡದ ಅಲಿ ಶೇಖ್‌ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.


Spread the love

About Laxminews 24x7

Check Also

ಚಿಂಚಣಿ, ಶಿರಗಾಂವ, ಇಂಗಳಿ ಪಿಕೆಪಿಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರಿಂದ ಸನ್ಮಾನ

Spread the loveಚಿಕ್ಕೋಡಿ:ಚಿಕ್ಕೋಡಿ ತಾಲ್ಲೂಕಿನ ಇಂಗಳಿ, ಶಿರಗಾಂವ, ಚಿಂಚಣಿ ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ನಡೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ