Breaking News

ನಾಗಾಲ್ಯಾಂಡ್ ಗಡಿಯಲ್ಲಿ ಬೆಳಗಾವಿ ಯೋಧನ ವೀರಮರಣ..

Spread the love

ಬೆಳಗಾವಿ : ನಾಗಲ್ಯಾಂಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜ್ಯದ ಯೋಧ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗೋಕಾಕ್ ತಾಲೂಕಿನ ಶಿವಾಪುರದ ಯೋಧ ಮಂಜುನಾಥ ಗೌಡನ್ನವರ (38) ಮೃತಪಟ್ಟಿರುವ ಯೋಧ.

ಕರ್ತವ್ಯದಲ್ಲಿದ್ದ ಇವರು ಗಸ್ತು ತಿರುಗುತ್ತಿದ್ದಾಗ ವಾಹನ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 18 ವರ್ಷದಿಂದ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್​​ನಲ್ಲಿ ನೇಮಕಗೊಂಡು, ನಾಗಲ್ಯಾಂಡ್ ಗಡಿಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಗಸ್ತು ತಿರುಗುತ್ತಿದ್ದಾಗ ಅರಣ್ಯ ಪ್ರದೇಶದಲ್ಲಿ ಅಪಘಾತ ಸಂಭವಿಸಿ ದುರ್ಘಟನೆ ನಡೆದಿದೆ. ನಾಳೆ ಸಂಜೆ 6ಗಂಟೆಗೆ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ