Breaking News

ರಾಜ್ಯದ ‌19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕಾರ

Spread the love

ಇದರ ಜೊತೆಗೆ ರಾಜ್ಯದ ಮುಖ್ಯಮಂತ್ರಿ ಗಳಾದ ಬಿ ಎಸ್ ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ,ಡಿಸಿಎಂ ಅಶ್ವಥ್ ನಾರಾಯಣ್, ಸಚಿವ ಸುಧಾಕರ್, ಆರ್ ಶಂಕರ್, ಮುರುಗೇಶ್ ನಿರಾಣಿ, ಕೇಂದ್ರ ಸಚಿವರಾದ ರಾಮ್ ದಾಸ್ ಅಠವಾಳೆ, ಸಂಸದೆ ಸುಮಲತಾ ಅಂಬರೀಶ್, ಸೇರಿದಂತೆ ಸಂಪುಟ ಸಚಿವರುಗಳು ನೂತನ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಗೆ ಶುಭಾಶಯ ಸಲ್ಲಿಸಿದ್ರು. ಇನ್ನೂ ರಾಜ ಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲರ ಪದಗ್ರಹಣ ಸಮಾರಂಭ ಸರಳ ರೀತಿಯಲ್ಲಿ ನಡೆಯಿತು.

ಕೊವೀಡ್ ಇರುವ ಕಾರಣ ಸರಳ ಸಮಾರಂಭದಲ್ಲಿ ಆಯ್ದ ಗಣ್ಯರಿಗೆ ಮಾತ್ರ ಕಾರ್ಯಕ್ರಮದ ಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಕೊವೀಡ್ ಮಾರ್ಗಸೂಚಿ ಗಳಂತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಪ್ರಕಾರವೇ ಕೆಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ರು. ಇನ್ನುಳಿದವರಿಗೆ ರಾಜಭವನದ ಒಳಗೆ ಪ್ರವೇಶ ನಿರ್ಬಂಧ ಮಾಡಲಾಗಿತ್ತು. ರಾಜ್ಯದ ನೂತನ ರಾಜ್ಯಪಾಲರಾದ ಥಾವರ್ ಚೆಂದ್ ಗೆಹ್ಲೋಟ್ ಅವ್ರು ಇಂದಿನಿಂದ ಅಧಿಕೃತವಾಗಿ ರಾಜ್ಯದ ಜವಾಬ್ದಾರಿ ಹೊತ್ತಿದ್ದು, ಸಂವಿಧಾನದತ್ತ ಅಧಿಕಾರಿಗಳನ್ನು ನಿಭಾಯಿಸಲಿದ್ದಾರೆ.. ಒಟ್ಟಾರೆ ಇಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮ ಕೋವಿಡ್ ನಿಂದ ಸರಳ ಸಮಾರಂಭ ವಾಗಿತ್ತು. ಇನ್ನೂ ರಾಜ್ಯದ ರಾಜ್ಯಪಾಲ ರಾಗಿ ನೂತನ ಥಾವರ್ ಚಂದ್ ಗೆಹ್ಲೋಟ್ ಕೂಡ ಸಂತೋಷದಿಂದ ಅಧಿಕಾರ ಸ್ವೀಕಾರ ಮಾಡೋದ್ರ ಮೂಲಕ ರಾಜ್ಯದ ಸಂವಿಧಾನದತ್ರ ಹುದ್ದೆ ರಾಜ್ಯಪಾಲರ ಹುದ್ದೆ ಯನ್ನು ಇಂದಿನಿಂದ ನಿಭಾಯಿಸಲಿದ್ದಾರೆ. ಜೊತೆಗೆ ಸರ್ಕಾರದ ಆಡಳಿತದ ಕೂಡ ಗಮನ ಕೊಡಲಿದ್ದಾರೆ.

ನ್ಯೂಸ್ ​​​18 ಕನ್ನಡ ಕಳಕಳಿ : ಕೊರೋನಾ ಪಾಸಿಟಿವ್ ​ ಕೇಸ್ ​ ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ . ಹೀಗಾಗಿ ಪ್ರತಿಯೊಬ್ಬರು ಕೋವಿಡ್ ​​ ನಿಯಮಗಳಾದ ಮಾಸ್ಕ್ ​​ ಧರಿಸುವುದು , ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು . ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು . ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು . ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ . ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು .


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ