Breaking News

ರಾಜ್ಯದ ಹಲವೆಡೆ ಭಾರೀ ಮಳೆ- ಎಲ್ಲೆಲ್ಲಿ ಏನೇನಾಗಿದೆ..?

Spread the love

ಬೆಂಗಳೂರು: ರಾಜ್ಯದ ಹಲವೆಡೆ ವರುಣರಾಯ ಅಬ್ಬರಿಸಿದ್ದಾನೆ. ಕೊಡಗು ಜಿಲ್ಲೆಯಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯ ಮುನ್ಸೂಚನೆ ಇದೆ. ಮುಂದಿನ 24 ಗಂಟೆಗಳಲ್ಲಿ 204 ಮಿಲಿ ಮೀಟರ್‍ಗೂ ಹೆಚ್ಚು ಮಳೆ ಬೀಳುವ ಸಂಭವ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಬೆಟ್ಟ-ಗುಡ್ಡ, ನದಿ ತೀರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಆದೇಶಿಸಿದೆ. ಅನಾಹುತ ತಪ್ಪಿಸಲು ಎನ್‍ಡಿಆರ್‍ಎಫ್ ತಂಡ ನಿಯೋಜಿಸಲಾಗಿದೆ.

ಗಡಿ ಜಿಲ್ಲೆ ಬೀದರ್ ಜಿಲ್ಲೆ ಔರಾದ್‍ನಲ್ಲಿ ಭಾರೀ ಮಳೆಗೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕೋಡಿಯಲ್ಲಿ ಕೃಷ್ಣಾ ನದಿ ನೀರಿನ ಹರಿವು ಏರಿಕೆಯಾಗಿದ್ದು, ನದಿ ತೀರದ ಜನರಿಗೆ ಎಚ್ಚರಿಕೆ ರವಾನಿಸಲಾಗಿದೆ. ಕಾಗವಾಡ ತಾಲೂಕಿನಲ್ಲಿ ಡಂಗೂರ ಸಾರಿಸಿ ಗ್ರಾಮಸ್ಥರನ್ನು ಎಚ್ಚರಿಸಲಾಗ್ತಿದೆ.ಉತ್ತರ ಕನ್ನಡ ಜಿಲ್ಲೆಯಲ್ಲೂ ಅಬ್ಬರದ ಮಳೆ ಸುರಿಯುತಿದ್ದು, ಕಾರವಾರ ಕಡಲತೀರದಲ್ಲಿ ಬಿರುಗಾಳಿ ಸಹಿತ ಅಬ್ಬರದ ಅಲೆಗಳು ಏಳುತ್ತಿವೆ. ಜಿಲ್ಲೆಯಾದ್ಯಂತ ಭಾರೀ ಮಳೆಯಿಂದ ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿದೆ. ಇತ್ತ ಉಡುಪಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ಇನ್ನೆರಡು ದಿನ ಮಳೆ ಮುನ್ಸೂಚನೆ ನೀಡಿದ್ದು, ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ