ಬೆಳಗಾವಿ – ಮಹಾನಗರ ಪಾಲಿಕೆ ಮುಂದೆ ಇರುವ ಕನ್ನಡ ಬಾವುಟವನ್ನು ಬದಲಾಯಿಸುವಂತೆ ಕರ್ನಾಟಕ ನವನಿರ್ಮಾಣ ಸೇನೆಯ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿಗಳು ಹಾಗೂ ಬೆಳಗಾವಿ ನಗರ ಪೋಲಿಸ ಆಯುಕ್ತರಿಗೆ ಸೋಮವಾರ ಮನವಿ ಸಲ್ಲಿಸಿದರು.ಮಹಾನಗರ ಪಾಲಿಕೆ ಮುಂದೆ ಇರುವ ಕನ್ನಡ ಬಾವುಟವು ಮಳೆ, ಗಾಳಿಗೆ ನಾಶಗೊಳುತ್ತಿದೆ. ಈ ಕಾರಣದಿಂದ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಕೂಡಲೇ ಎಚ್ಚೆತುಕೊಂಡು ಬಾವುಟ ಬದಲಾವಣೆ ಮಾಡಬೇಕು. ಬಾವುಟ ನಾಶಗೊಳ್ಳುತ್ತಿರುವುದರಿಂದ ಬೆಳಗಾವಿ ಸಮಸ್ತ ಕನ್ನಡಿಗರ ಭಾವನೆಗೆ ದಕ್ಕೆ ಉಂಟಾಗುತ್ತಿದೆ. ಮುಂದಿನ ಎರಡು ದಿನಗಳಲ್ಲಿ ಬಾವುಟ ಬದಲಾವಣೆ ಮಾಡದಿದ್ದರೆ ಕರ್ನಾಟಕ ನವನಿರ್ಮಾಣ ಸೇನೆಯು ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರದ ವಿರುದ್ದ ಉಗ್ರ ಹೋರಾಟ ನಡೆಸಬೇಕಾಗುತ್ತದೆ. ಇಂತಹ ಘಟನೆಗಳಿಗೆ ಅವಕಾಶ ನೀಡದೇ ಕನ್ನಡ ಬಾವುಟ ಬದಲಾವಣೆ ಮಾಡಬೇಕೆಂದು ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಹಾಗೂ ಬೆಳಗಾವಿ ನಗರ ಪೋಲಿಸ ಆಯುಕ್ತರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ನವನಿರ್ಮಾಣ ಸೇನೆಯ ಜಿಲ್ಲಾಧ್ಯಕ್ಷ ಬಾಬು ಸಂಗೋಡಿ, ಬಸವರಾಜ ದೊಡಮನಿ, ಮಂಜುನಾಥ ಹಡಪದ, ಶ್ರೀಕಾಂತ ಹಂಪನವರ, ಸಾ
