Breaking News
Home / Uncategorized / ಕರ್ನಾಟಕದಲ್ಲೂ ಜನಸಂಖ್ಯೆ ನಿಯಂತ್ರಣ ನೀತಿ ಜಾರಿಗೊಳಿಸಲು ಇದು ಸಕಾಲ: ಸಿ.ಟಿ.ರವಿ

ಕರ್ನಾಟಕದಲ್ಲೂ ಜನಸಂಖ್ಯೆ ನಿಯಂತ್ರಣ ನೀತಿ ಜಾರಿಗೊಳಿಸಲು ಇದು ಸಕಾಲ: ಸಿ.ಟಿ.ರವಿ

Spread the love

ಬೆಂಗಳೂರು: ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸೂಕ್ತ ಸಮಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಉತ್ತರ ಪ್ರದೇಶದ ಜನಸಂಖ್ಯಾ ನಿಯಂತ್ರಣ ನೀತಿಯ ಬಗ್ಗೆ ಚರ್ಚೆ ಆಗುತ್ತಿರುವ ಸಮಯದಲ್ಲೇ ಸಿ.ಟಿ.ರವಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ. ಹೀಗಾಗಿ ರಾಜ್ಯದಲ್ಲೂ ಜನಸಂಖ್ಯಾ ನಿಯಂತ್ರಣ ನೀತಿ ಜಾರಿಗೊಳಿಸಬೇಕು ಎಂದು ಸಿ.ಟಿ.ರವಿ ಹೇಳಿದ್ದಾರೆ.

ಸಿಎಂ ಜೊತೆ ಚರ್ಚೆ: ಈಶ್ವರಪ್ಪ

ಒಂದು ಕುಟುಂಬಕ್ಕೆ ಎರಡೇ ಮಕ್ಕಳು ಎಂದು ಜನಸಂಖ್ಯಾ ನಿಯಂತ್ರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಕೈಗೊಂಡ ನಿರ್ಣಯ ಸಕಾಲಿಕ. ರಾಜ್ಯದಲ್ಲೂ ಶೀಘ್ರವೇ ಇದರ ಅನುಷ್ಠಾನದ ಕುರಿತು ಸಿಎಂ ಯಡಿಯೂರಪ್ಪ ಜತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವಕೆ.ಎಸ್‌.ಈಶ್ವರಪ್ಪ ಹೇಳಿದ್ದರು.

ಣಕ್ಕೆ ಬಹಳ ವರ್ಷದಿಂದ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಆದರೂ ಜನಸಂಖ್ಯೆ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಉತ್ತರ ಪ್ರದೇಶ ಸರ್ಕಾರ ಈಗ ಕಾರ್ಯೋನ್ಮುಖವಾಗಿದೆ. ಅಲ್ಲಿನ ಪ್ರಯತ್ನ ನೋಡಿಕೊಂಡು ನಮ್ಮ ರಾಜ್ಯದಲ್ಲೂ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲರೂ ಕುಳಿತು ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದರು


Spread the love

About Laxminews 24x7

Check Also

ಮಳೆ.. ಮಳೆ.. ಆರ್‌ಸಿಬಿ VS ಚೆನ್ನೈ ಮ್ಯಾಚ್ ರದ್ದು?

Spread the love ಮಳೆ.. ಮಳೆ.. ಎಲ್ಲೆಲ್ಲೂ ಮಳೆಯ ಅಬ್ಬರ ಶುರುವಾಗಿದೆ. ಅದರಲ್ಲೂ ಬೆಂಗಳೂರು & ಚೆನ್ನೈ ನಡುವೆ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ