Breaking News

ವಾಹನ ಸವಾರರಿಗೆ ನೆಮ್ಮದಿಯ ಸುದ್ದಿ : ಈ ತಿಂಗಳ ಅಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ!

Spread the love

ನವದೆಹಲಿ : ಬೆಲೆ ಏರಿಕೆಯಿಂದ ತತ್ತರಿಸಿರುವ ವಾಹನ ಸವಾರರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಮಾಸಾಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

 

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಸ್ಥಿರತೆ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಮಾಸಾಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ದೇಶದಲ್ಲಿ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದ್ದು, ಈ ತಿಂಗಳ ಅಂತ್ಯಕ್ಕೆ ಇಳಿಕೆಯಾಗುವ ಸಾಧ್ಯತೆ ಇದೆ.

 

ಪ್ರತಿ ಬ್ಯಾರೆಲ್ ನ ಬ್ರೆಂಟ್ ಕಚ್ಚಾತೈಲ ದರವು 77 ಡಾಲರ್ ಗೆ ಏರಿಕೆಯಾಗಿತ್ತು. ಆದರೆ ಇದೀಗ 75 ಡಾಲರ್ ಗೆಇಳಿಕೆಯಾಗಿದ್ದು, ಈ ದರದಲ್ಲೇ ಸ್ಥಿರತೆ ಕಾಯ್ದುಕೊಂಡರೆ ಈ ತಿಂಗಳ ಅಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ