Breaking News

ಕೋವಿಡ್ ನಿಂದ ಮೃತಪಟ್ಟ ರೈತರ ಸಾಲ ಮನ್ನಾ.!

Spread the love

ಬೆಂಗಳೂರು: ಕೊರೊನಾ ಸೋಂಕಿನಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ನೆರವು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಕೋವಿಡ್ ಗೆ ಬಲಿಯಾದ ರೈತರ ಸಾಲ ಮನ್ನಾ ಮಾಡಲು ಚಿಂತನೆ ನಡೆಸಿದೆ.

ಈ ಕುರಿತು ಸಚಿವ ಎಸ್.ಟಿ.ಸೋಮಶೇಖರ ಮಾಹಿತಿ ನೀಡಿದ್ದು, ಕೊರೋನಾದಿಂದ ಮೃತಪಟ್ಟ 10187 ರೈತರ 79.47 ಕೋಟಿ ರೂ. ಸಾಲ ಮನ್ನಾ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ 3-4 ದಿನಗಳಲ್ಲಿ ಅಪೆಕ್ಸ್, ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಸಭೆ ಸೇರಿ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದರು.

ಕಳೆದ ವರ್ಷ 25.67 ಲಕ್ಷ ರೈತರಿಗೆ 17,108 ಕೋಟಿ ರೂಪಾಯಿ ಸಾಲ ನೀಡುವ ಮೂಲಕ ಶೇ.114 ಗುರಿ ಸಾಧನೆಯನ್ನು ಮಾಡಲಾಗಿತ್ತು. ಈಗ 25.67 ಲಕ್ಷ ರೈತರಲ್ಲಿ ಕೋವಿಡ್ ನಿಂದ ಮೃತಪಟ್ಟಿರುವ 10187 ರೈತರ 79.47 ಕೋಟಿ ರೂಪಾಯಿ ಸಾಲ ಮನ್ನಾ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಜಿಲ್ಲಾವಾರು ರೈತರ ಸಾಲ ಮನ್ನಾ ಪ್ರಕ್ರಿಯೆ ಪಟ್ಟಿ ಕೂಡ ಸಿದ್ಧವಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ