Breaking News

ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 9 ಅಧಿಕಾರಿಗಳಿಗೆ ಬ್ರಷ್ಟಾಚಾರ ನಿಗ್ರಹ ದಳ ಬೆಳ್ಳಂಬೆಳಗ್ಗೆಯೇ ಶಾಕ್

Spread the love

ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 9 ಅಧಿಕಾರಿಗಳಿಗೆ ಬ್ರಷ್ಟಾಚಾರ ನಿಗ್ರಹ ದಳ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದೆ. ಬರೋಬ್ಬರಿ 300ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು 40ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಯಾವೆಲ್ಲಾ ಜಿಲ್ಲೆಯಲ್ಲಿ ದಾಳಿ?

  • ಬೆಂಗಳೂರು
  • ಮೈಸೂರು
  • ಮಂಡ್ಯ
  • ವಿಜಯಪುರ
  • ಮಂಗಳೂರು
  • ಉಡುಪಿ
  • ಕೋಲಾರ
  • ಚಿತ್ರದುರ್ಗ
  • ಬಳ್ಳಾರಿ

ಯಾರೆಲ್ಲಾ ನಿವಾಸ ಹಾಗೂ ಮನೆಗಳ ಮೇಲೆ ದಾಳಿ?

  • ಜಿ. ಶ್ರೀಧರ್ -ಮಂಗಳೂರು ನಗರಾಭಿವೃದ್ಧಿ ಘಟಕ -ಡಿಸಿ ಕಚೇರಿ
  • ಕೃಷ್ಣ.ಎಸ್ -ಹೆಬ್ಸೂರು ಇಇ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ-ಉಡುಪಿ
  • ಆರ್.ಪಿ.ಕುಲಕರ್ಣಿ -ಸಿಇ-KRIDCL (ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿಮಿಟೆಡ್-ಬೆಂಗಳೂರು)
  • ಹೆಚ್.ಆರ್.ಕೃಷ್ಣಪ್ಪ -ಸಹಾಯಕ ನಿರ್ದೇಶಕ- ಮಾಲೂರು ನಗರ ನಗರ ಯೋಜನಾ ಪ್ರಾಧಿಕಾರ, ಕೋಲಾರ
  • ಸುರೇಶ್ ಮೋಹ್ರೆ -JE PRE ಬೀದರ್
  • ವೆಂಕಟೇಶ್ ಟಿ -DCF ಸಾಮಾಜಿಕ ಅರಣ್ಯ-ಮಂಡ್ಯ
  • ಸಿದ್ದರಾಮ ಮಲ್ಲಿಕಾರ್ಜುನ್ -AEE ಹೆಸ್ಕಾಂ ವಿಜಯಪುರ
  • ಎ.ಕೃಷ್ಣಮೂರ್ತಿ -ಹಿರಿಯ ಮೋಟಾರು ವಾಹನ ನಿರೀಕ್ಷಕರು-ಕೋರಮಂಗಲ
  • ಎ.ಎನ್.ವಿಜಯ್​ ಕುಮಾರ್​ -ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್-ಬಳ್ಳಾರಿ

ಕೋಲಾರ ಜಿಲ್ಲೆಯ ಮಾಲೂರು‌ ನಗರ ಸಭೆಯ ಯೋಜನಾ ನಿರ್ದೇಶಕ ಹೆಚ್.ಆರ್.ಕೃಷ್ಣಪ್ಪ ನಿವಾಸ ಹಾಗೂ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳ್ಳಂಬೆಳಗ್ಗೆಯೇ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಹಾಗೂ ಆಸ್ತಿ‌ಪತ್ರಗಳನ್ನ ಪರಿಶೀಲನೆ ಮಾಡ್ತಿದ್ದಾರೆ. ಇವರ ಸ್ವ-ಗ್ರಾಮವಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ, ಮಾಲೂರು ಮನೆ, ಬೆಂಗಳೂರಿನ ವಿಜಯನಗರದಲ್ಲಿರುವ ಮನೆ ಮತ್ತು ‌ಕಚೇರಿ ಐದು ಕಡೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾವಣಗೆರೆ ಎಸಿಬಿ ಎಸ್ಪಿ ಜಯಪ್ರಕಾಶ್​ ನೇತ್ರತ್ವದ ತಂಡದಿಂದ ದಾಳಿ ನಡೆದಿದೆ.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ