Breaking News

ಡಿಸೆಂಬರ್‌ ವರೆಗೆ ತಾ. ಪಂ, ಜಿ.ಪಂ ಚುನಾವಣೆ ಇಲ್ಲ: ಸಂಪುಟ ಸಭೆಯಲ್ಲಿ ತೀರ್ಮಾನ

Spread the love

ಬೆಂಗಳೂರು: ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪದಾಧಿಕಾರಿಗಳ ಸ್ಥಾನಗಳಿಗೆ ಚುನಾವಣೆ ನಡೆಸಲು ಅನುಮತಿ ನೀಡಲಾಗಿದೆ. ಆದರೆ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಡಿಸೆಂಬರ್‌ ವರೆಗೆ ಚುನಾವಣೆ ನಡೆಸದಿರಲು ನಿರ್ಧರಿಸಲಾಗಿದೆ.

ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು.

ಸಹಕಾರ ಇಲಾಖೆ ವ್ಯಾಪ್ತಿಗೆ ಬರುವ ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳಲ್ಲಿ ಅವಧಿ ಮುಗಿದ ನಿರ್ದೇಶಕ ಮಂಡಳಿಗೆ ಮಾತ್ರ ಚುನಾವಣೆ ನಡೆಸಲಾಗುವುದು. ಆದರೆ, ಜಿಲ್ಲಾಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಡಿಸೆಂಬರ್‌ ವರೆಗೆ ಚುನಾವಣೆ ನಡೆಸದಿರಲು ನಿರ್ಧರಿಸಲಾಗಿದೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ