Breaking News
Home / ರಾಜಕೀಯ / ವಿದ್ಯುತ್ ಕಂಬಕ್ಕೆ ಟಾಟಾ ಸುಮೋ ಡಿಕ್ಕಿ – ಮಹಿಳೆ ಸಾವು, ಮೂವರ ಸ್ಥಿತಿ ಗಂಭೀರ

ವಿದ್ಯುತ್ ಕಂಬಕ್ಕೆ ಟಾಟಾ ಸುಮೋ ಡಿಕ್ಕಿ – ಮಹಿಳೆ ಸಾವು, ಮೂವರ ಸ್ಥಿತಿ ಗಂಭೀರ

Spread the love

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಸುಮೋ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆ ಮೃತಪಟ್ಟು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ವರನಹೊಂಡ ಎಂಬಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ನೀಲಮ್ಮ (60) ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತೀರ್ಥಹಳ್ಳಿ ರಸ್ತೆಯ ಜಂಬಳ್ಳಿ ಕಡೆಯಿಂದ ರಿಪ್ಪನ್ ಪೇಟೆಗೆ ಆಗಮಿಸುತ್ತಿದ್ದ ಟಾಟಾ ಸುಮೋದಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಘಟನೆ ಕುರಿತು ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ