Breaking News

ಸಿಡಿ ಪ್ರಕರಣ ಎಸ್ಐಟಿ ತನಿಖಾ ವರದಿ ರೆಡಿ

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಚಿಸಲಾಗಿದ್ದ ಎಸ್ ಐಟಿ ರಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

 

ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಆರೋಪಿ ಮನವಿ ಮೇರೆಗೆ ಎಸ್ ಐಟಿ ರಚನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಿಚಾರಣೆಗೂ ಮುನ್ನ ತನಿಖಾ ವರದಿ ಪರಿಶೀಲಿಸುವ ಅಗತ್ಯವಿದೆ. ಎಲ್ಲಾ ಎಫ್ ಐಆರ್ ಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡುವಂತೆ ಎಜಿ ಗೆ ಹೈಕೋರ್ಟ್ ಸೂಚಿಸಿದೆ.

ಹೈಕೋರ್ಟ್ ಸೂಚನೆಗೆ ಪ್ರತಿಕ್ರಿಯಿಸಿದ ಎಜಿ ಪ್ರಭುಲಿಂಗ ನಾವದಗಿ, ಜುಲೈ 19ರಂದು ಮುಚ್ಚಿದ ಲಕೋಟೆಯಲ್ಲಿ ತನಿಖೆ ಮುಕ್ತಾಯದ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜುಲೈ 20ಕ್ಕೆ ಮುಂದೂಡಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ