Breaking News

ವಿಜಯಪುರ ವಿ.ನಿಲ್ದಾಣ ಕಾರ್ಯಾಚರಣೆಗೆ ಮುಂದಾದ ಟರ್ಬೋ ಏರ್‌ಲೈನ್ ಕಂಪನಿ: ಗೋವಿಂದ ಕಾರಜೋಳ

Spread the love

ಬೆಂಗಳೂರು: ವಿಜಯಪುರ ವಿಮಾನ ನಿಲ್ದಾಣ ಕಾರ್ಯಾಚರಣೆ ನಡೆಸಲು ಮೆ.ಟರ್ಬೋ ಏರ್ ಲೈನ್ ಕಂಪನಿಯವರು ಮುಂದೆ ಬಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ವಿಜಯಪುರ ವಿಮಾನ ನಿಲ್ದಾಣದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿದಿನ ಎಟಿಆರ್ 72 ವಿಮಾನವನ್ನು ಹಾರಾಟ ನಡೆಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಸಕ್ತಿ ಹೊಂದಿವೆ. ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಯು ತ್ವರಿತಗತಿಯಿಂದ ನಡೆಯುತ್ತಿದ್ದು, ಈ ಕಾಮಗಾರಿಯನ್ನು 2022ರ ಮಾರ್ಚ್ ಗೆ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ. ಈಗಾಗಲೇ ಕಾಮಗಾರಿಯು ತ್ವರಿತಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ನಿರಂತರವಾಗಿ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲನೆ ನಡೆಸಿ, ಈ ವಿಮಾನ ನಿಲ್ದಾಣದ ಕಾಮಗಾರಿಯ ಗುಣಮಟ್ಟ ಕಾಯ್ದುಕೊಂಡು ಹಾಗೂ ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುತ್ತಿದೆ. ಉತ್ತರ ಕರ್ನಾಟಕದ ಅದರಲ್ಲೂ ವಿಜಯಪುರ- ಬಾಗಲಕೋಟೆ ಅವಳಿ ಜಿಲ್ಲೆಗಳ ಜನತೆಗೆ ವಿಮಾನ ಯಾನ ಕೈಗೊಳ್ಳಲು ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

 

ಸಂಸದ ರಮೇಶ್ ಜಿಗಜಿಣಗಿ ಹಾಗೂ ಅವಳಿ ಜಿಲ್ಲೆಗಳ ಜನಪ್ರತಿನಿಧಿಗಳ ಒತ್ತಾಸೆಯಂತೆ ವಿಜಯಪುರ ಬಾಗಲಕೋಟೆ ಅವಳಿ ಜಿಲ್ಲೆಗಳು, ಸೊಲ್ಲಾಪುರ ಜಿಲ್ಲೆಯ ಬಹುದಿನಗಳ ಕನಸಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಅನುದಾನ ನೀಡಿ, ಯೋಜನೆಯ ಯಶಸ್ವಿಗೆ ಕಾರಣವಾಗಿದ್ದಾರೆ. ಸ್ಥಳೀಯ, ದೇಶ ವಿದೇಶಗಳ ಪ್ರವಾಸಿಗರು, ನಾಗರೀಕರು ಸುಲಲಿತವಾಗಿ ವಿಮಾನಯಾನ ನಡೆಸಿ, ಈ ಐತಿಹಾಸಿಕ, ಪಾರಂಪರಿಕ, ಪ್ರವಾಸೋದ್ಯಮ ತಾಣಗಳಿಗೆ ಪ್ರವಾಸ ಕೈಗೊಳ್ಳಲು ಅನುಕೂಲವಾಗಲಿದೆ ಎಂದು ಡಿಸಿಎಂ ತಿಳಿಸಿದ್ದಾರೆ.


Spread the love

About Laxminews 24x7

Check Also

ಚೈನ್ನೈನ 16ನೇ ಐ.ಎ.ಪಿ.ಎಚ್.ಡಿ ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್‌ಇ ವಿಕೆ ದಂತ ವಿಜ್ಞಾನ ವಿಭಾಗದ ಉತ್ತಮ ಪ್ರದರ್ಶನ

Spread the love ಚೈನ್ನೈನ 16ನೇ ಐ.ಎ.ಪಿ.ಎಚ್.ಡಿ ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್‌ಇ ವಿಕೆ ದಂತ ವಿಜ್ಞಾನ ವಿಭಾಗದ ಉತ್ತಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ