ಬೆಂಗಳೂರು : ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಆಗಸ್ಟ್ ಮೊದಲ ವಾರದಲ್ಲಿ ನಡೆಸಲು ಸರಕಾರ ಚಿಂತನೆ ನಡೆಸಿದೆ.
ಈ ಕುರಿತು ಸಿಎಂ ಯಡಿಯೂರಪ್ಪ ತಮ್ಮ ಆಪ್ತ ಸಚಿವರ ಜತೆಗೆ ಸಮಾಲೋಚನೆ ನಡೆಸಿದ್ದು, ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲಿಯೇ ನಡೆಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಎರಡು ವರ್ಷಗಳಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನವನ್ನೇ ನಡೆಸಿಲ್ಲ. ಹೀಗಾಗಿ ಈ ಬಾರಿ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವ ಮೂಲಕ ಉತ್ತರ ಕರ್ನಾಟಕ ಭಾಗದ ವಿಷಯಗಳ ಚರ್ಚೆಗೆ ಆದ್ಯತೆ ನೀಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದರು.
ಆದರೆ, ರಾಜ್ಯದಲ್ಲಿ ಕೊರೊನಾ ವೈರಸ್ ಹಾವಳಿ ಇನ್ನೂ ಪೂರ್ಣ ಪ್ರಮಾಣದಲ್ಲಿ ಕಡಿಮೆಯಾಗದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿಯೇ ಅಧಿವೇಶನ ನಡೆಸಲು ಸಿಎಂ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಕನಿಷ್ಠ ಎರಡು ವಾರಗಳ ಕಾಲ ಅಧಿವೇಶನ ನಡೆಸುವ ಬಗ್ಗೆ ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
Laxmi News 24×7