ವಿಜಯಪುರ : ಕಾಂಗ್ರೆಸ್ ಪಕ್ಷದ ಲಿಂಗಾಯತ ಸಮುದಾಯದ ಹಿರಿಯ ಶಾಸಕ ಎಂ.ಬಿ.ಪಾಟೀಲ ಮುಖ್ಯಮಂತ್ರಿ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ.
ತಮ್ಮ ಟ್ವಿಟರ್ ಖಾತೆಯಲ್ಲಿ ,ಲಿಂಗಾಯತ ಸಮುದಾಯದ ಧೀಮಂತ ನಾಯಕರಾಗಿರುವ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದ ಅಧಿಕಾರದಿಂದ ಪದಚ್ಯುತಿ ಮಾಡಕೂಡದು. ಒಂದೊಮ್ಮೆ ಬಿಜೆಪಿ ಇಂಥ ಕೆಲಸಕ್ಕೆ ಕೈ ಹಾಕಿದರೆ ಬಿಜೆಪಿ ವರಿಷ್ಠರು ಖಂಡಿತವಾಗಿ ಲಿಂಗಾಯತರ ಅವಕೃಪೆಗೆ ಗುರಿ ಆಗಲಿದ್ದಾರೆ ಎಂದೂ ಎಚ್ಚರಿಸಿದ್ದಾರೆ.
ಯಡಿಯೂರಪ್ಪ ಅವರ ವಯಸ್ಸು, ಪಕ್ಷ ಹಾಗೂ ನಾಡಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ, ಗೌರವ, ಮರ್ಯಾದೆಯಿಂದ ನಡೆಸಿಕೊಳ್ಳಬೇಕು ಎಂಬುದು ನನ್ನ ವೈಯಕ್ತಿಕ ಅನಿಸಿಕೆ ಎಂದೂ ಲಿಂಗಾಯತ ಸಮುದಾಯದ ಮುಂಚೂಣಿ ನಾಯಕರೂ ಆಗಿರುವ ಎಂ.ಬಿ.ಪಾಟೀಲ ಬಿಜೆಪಿ ವರಿಷ್ಠರಿಗೆ ಸಲಹೆ ನೀಡಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ @BSYBJP ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ.
— M B Patil (@MBPatil) July 19, 2021
Laxmi News 24×7