Breaking News
Home / ಜಿಲ್ಲೆ / ಬೆಂಗಳೂರು / ಬೆಂಗಳೂರಿಗರೇ ಗಮನಿಸಿ; ನಮ್ಮ ಮೆಟ್ರೋ ಸಂಚಾರದ ಅವಧಿ ವಿಸ್ತರಣೆ

ಬೆಂಗಳೂರಿಗರೇ ಗಮನಿಸಿ; ನಮ್ಮ ಮೆಟ್ರೋ ಸಂಚಾರದ ಅವಧಿ ವಿಸ್ತರಣೆ

Spread the love

ಬೆಂಗಳೂರು: ಮೆಟ್ರೋ ರೈಲು ಸಂಚಾರದ ಅವಧಿ ರಾತ್ರಿ 9ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಬೆಳಗ್ಗೆ 7ರಿಂದ ರಾತ್ರಿ 8ರವರೆಗೆ ನಮ್ಮ ಮೆಟ್ರೋ ಸಂಚರಿಸುತ್ತಿತ್ತು. ಆದರೆ ಈಗ ರಾತ್ರಿ 9ರವರೆಗೆ ಮೆಟ್ರೋ ಸಂಚಾರ ಸೇವೆಯನ್ನು ಒದಗಿಸವಂತೆ ಅವಧಿ ವಿಸ್ತರಿಸಿ ಬಿಎಂಆರ್​ಸಿಎಲ್ ಆದೇಶಿಸಿದೆ. ಈ ಮೂಲಕ ಬೆಂಗಳೂರು ಮಹಾನಗರದ ಮೆಟ್ರೋ (Bengaluru Namma metro) ಪ್ರಯಾಣಿಕರ ಸಂಚಾರಕ್ಕೆ ಇನ್ನಷ್ಟು ಸೌಲಭ್ಯ ಒದಗಿಸಿದೆ.

ಇತ್ತೀಚಿಗಷ್ಟೇ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್​ನ ವ್ಯವಸ್ಥಾಪಕ ನಿರ್ದೇಶಕರಾಗಿ ಇತ್ತೀಚಿಗಷ್ಟೇ ಅಂಜುಂ ಪರ್ವೇಜ್ ನೇಮಕವಾಗಿದ್ದಾರೆ. ಹಿರಿಯ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್​ ಅವರನ್ನು ಬೆಂಗಳೂರು ಮೆಟ್ರೋ ಎಂಡಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿದ್ದ ಪರ್ವೇಜ್, ಕರ್ನಾಟಕ ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರದಿಂದ ಬಿಎಮ್​ಆರ್​ಸಿಎಲ್ ಎಂಡಿ ಆಗಿ ನೇಮಕಾತಿ ಹೊಂದಿದ್ದಾರೆ.

ಬೆಂಗಳೂರು ಮೆಟ್ರೋ ಯೋಜನೆಗಾಗಿ ಮರ ಕಡಿಯಲು ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್​
ಮೆಟ್ರೋ ರೈಲು ಯೋಜನೆಗಾಗಿ ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್​ ಷರತ್ತುಬದ್ಧ ಅನುಮತಿ ನೀಡಿದೆ. ನಾಗವಾರ-ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಯೋಜನೆಗಾಗಿ ಮರಗಳನ್ನು ಕಡಿಯಬೇಕಾಗಿದೆ. ಈ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​, ಪರಿಹಾರ ರೂಪದಲ್ಲಿ 4000 ಮರಗಳನ್ನು ಬೆಳೆಸಬೇಕು ಮತ್ತು ಸ್ಥಳಾಂತರಗೊಂಡ ಮರಗಳನ್ನು ಸರಿಯಾಗಿ ಪೋಷಿಸಬೇಕು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು.

ಮರ ಅಧಿಕಾರಿ ಮತ್ತು ಡಿಸಿಎಫ್ ವರ್ತನೆ ಸರಿಯಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್​, ಮರ ಬೆಳೆಸಲು ಸೂಕ್ತ ಪರ್ಯಾಯ ಜಾಗವನ್ನು ಪರಿಶೀಲಿಸಬೇಕಿತ್ತು ಎಂದು ಹೇಳಿತು. ಕಡಿಯುವ ಮರಗಳಿಗೆ ಬದಲಿಯಾಗಿ ಬೆಳೆಸುವ ಮರಗಳು ಮತ್ತು ಮಣ್ಣಿನ ಪರೀಕ್ಷೆಯ ವಿವರವನ್ನು ಎರಡು ವಾರಗಳ ಒಳಗೆ ನೀಡಬೇಕು ಎಂದು ಹೇಳಿತು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ