Breaking News

ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ ಎಂ.ಜೆ. ನೇಮಕ

Spread the love

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಇಲ್ಲಿನ ಸದಾಶಿವ ನಗರದ ಪ್ರದೀಪ ಎಂ.ಜೆ. ಇವರನ್ನು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿ (ಆಡಳಿತ) ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಅವರು ಆದೇಶ ಹೊರಡಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸತೀಶ ಜಾರಕಿಹೊಳಿ ಅವರು ಪ್ರದೀಪ ಎಂ.ಜೆ. ಅವರಿಗೆ ಆದೇಶ ಪ್ರತಿ ವಿತರಿಸಿದರು.
ನಂತರ ಮಾತನಾಡಿದ ಸತೀಶ ಜಾರಕಿಹೊಳಿ ಅವರು, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ನೀತಿ, ನಿಯಮ ಹಾಗೂ ಶಿಸ್ತಿಗೊಳಪಟ್ಟು ಪಕ್ಷದ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಈ ಕೂಡಲೇ ತಮ್ಮ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷ ಸಂಘಟನೆಯ ಕೆಲಸದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕಾಂಗ್ರೆಸ್ ಪಕ್ಷದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಬೇಕೆಂದು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಮುಖಂಡರಾದ ಸಿದ್ದು ಸುಣಗಾರ, ಜಯಶ್ರೀ ಮಾಳಗಿ, ಬಾಳೇಶ ದಾಸನಟ್ಟಿ, ಜಯರಾಜ್ ಹಲಗೇಕರ್, ಮಂಜುನಾಥ ಕಾಂಬಳೆ, ಮಲ್ಲಗೌಡ ಪಾಟೀಲ ಸೇರಿ ಇನ್ನಿತರರು ಇದ್ದರು.

Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ