Breaking News

ಸಿಎಂ ಹುದ್ದೆ ಖಾಲಿ ಇದ್ರೆ ನೆಕ್ಸ್ಟ್ ನಾನೇ ಉಮೇಶ್ ಕತ್ತಿ

Spread the love

ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ವದಂತಿ ಬೆನ್ನಲ್ಲೇ ಆಹಾರ ಸಚಿವ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದು, ಸಿಎಂ ಹುದ್ದೆ ಖಾಲಿ ಇದ್ರೆ ನೆಕ್ಸ್ಟ್ ನಾನೇ ಇದ್ದೇನೆ ಎಂದು ಹೇಳುವ ಮೂಲಕ ಸಿಎಂ ಸ್ಥಾನದ ಆಸೆಯನ್ನು ತೇಲಿಬಿಟ್ಟಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಕತ್ತಿ, ಸಿಎಂ ಹುದ್ದೆ ಖಾಲಿಯಾದರೆ ನಂತರ ನಾನೇ ಇದ್ದೇನೆ. ಮುಖ್ಯಮಂತ್ರಿಯಾಗಲು ನನಗೆ ಎಲ್ಲಾ ಅರ್ಹತೆಗಳಿವೆ. ನನ್ನ ಮೇಲೆ ಯಾವುದೇ ಕಳಂಕದ ಆರೋಪಗಳು ಇಲ್ಲ, 8 ಬಾರಿ ಶಾಸಕನಾಗಿ ಕೂದ ಆಯ್ಕೆಯಾದವನು. ಪಕ್ಷ ಮನಸ್ಸು ಮಾಡಿದರೆ ಸಿಎಂ ಆಗಬೇಕೆಂಬ ಆಸೆಯಿದೆ ಎಂದರು.

ಸಿಎಂ ಬದಲಾವಣೆ ಯಾರು ಮಾಡುತ್ತಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ಹೈಕಮಾಂಡ್ ಮನಸ್ಸು ಮಾಡಿದರೆ ಸಿಎಂ ಆಗುವ ಆಸೆಯಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ