ಮುಂಬೈ: ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಸೋಮವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಮತ್ತು ಕೆಲವು ಆಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪ ಅವರ ಮೇಲಿದೆ.
ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಬಿತ್ತರಿಸುತ್ತಿರುವ ಬಗ್ಗೆ 2021ರ ಫೆಬ್ರುವರಿಯಲ್ಲಿ ಮುಂಬೈನ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು. ರಾಜ್ ಕುಂದ್ರಾ ಅವರನ್ನು ಈ ಪ್ರಕರಣದಲ್ಲಿ ನಾವು ಸೋಮವಾರ ಬಂಧಿಸಿದ್ದೇವೆ. ಅವರು ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.
ಈ ಬಗ್ಗೆ ನಮ್ಮ ಬಳಿ ಸಾಕಷ್ಟು ಪುರಾವೆಗಳಿವೆ’ ಎಂದು ಮುಂಬೈ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತನಿಖೆ ಮುಂದುವರಿದಿರುವುದಾಗಿ ಅವರು ಹೇಳಿದ್ದಾರೆ.
Laxmi News 24×7